ಕೂಡಿಗೆ, ಅ. ೮: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ೨೦೨೩-೨೪ ಸಾಲಿನ ಹಾಕಿ ಪಂದ್ಯಾವಳಿಯು ಇಂದು (ತಾ.೯) ಕೂಡಿಗೆ ಕ್ರೀಡಾ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಬಾರ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಸೇರಿದಂತೆ ಜಿಲ್ಲಾ ಪಂಚಾಯಿತಿ ಉಸ್ತುವಾರಿ ಗಳಾದ ಡಾ. ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಇಲಾಖೆ ರಾಜ್ಯಮಟ್ಟದ ಅಧಿಕಾರಿ ವರ್ಗದವರು, ವಿಭಾಗ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.