ಗೋಣಿಕೊಪ್ಪಲು, ಅ.೮: ಶಾಲಾ ಆವರಣದಲ್ಲಿ ನಿಲ್ಲಿಸಲಾಗಿದ್ದ ಶಾಲಾ ಬಸ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಗೋಣಿಕೊಪ್ಪ ಸಮೀಪದ ಅತ್ತೂರು ಗ್ರಾಮದ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ನಡೆದಿದೆ.
ಮಧ್ಯರಾತ್ರಿ ವೇಳೆ ಶಾಲೆಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಬಸ್ಗೆ ಬೆಂಕಿ ಹಾಕಲಾಗಿದ್ದು, ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಶಾಲಾ ಆವರಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದರೂ ಮಧ್ಯರಾತ್ರಿ ೧-೩೦ ರ ಸುಮಾರಿಗೆ ವಿದ್ಯುತ್ ಲೋ ವೋಲ್ಟೇಜ್ ಇದ್ದ ಹಿನ್ನೆಲೆಯಲ್ಲಿ ಕ್ಯಾಮರಾ ಕೆಲಸ ಮಾಡಿಲ್ಲ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದ ಗೋಣಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಯುತ್ತಿದೆ.