ಕೂಡಿಗೆ, ಅ. ೮: ಕೊಡಗು ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆಯ ಸರ್ಕಾರಿ ಪ್ರೌಢ ಕ್ರೀಡಾಶಾಲೆಯಲ್ಲಿ ಮೈಸೂರು ವಿಭಾಗ ಮಟ್ಟದ ಶಾಲಾ ಮಕ್ಕಳ ಹಾಕಿ ಪಂದ್ಯಾಟ ಜರುಗಿತು. ಟೂರ್ನಿಯಲ್ಲಿ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರು ಹಾಕಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

ಟೂರ್ನಿಯಲ್ಲಿ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್ ಪಲ್ಲೇದ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳ ಎ.ಎ. ಲಕ್ಷö್ಮಣ್, ಎಚ್.ಪಿ. ಕರುಂಬಯ್ಯ, ಬಿ.ಟಿ. ಪೂರ್ಣೇಶ್, ಮೋಹನ್, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.