ಮಡಿಕೇರಿ, ಅ. ೭: ನೂತನ ಶಿಕ್ಷಣ ನೀತಿ ರದ್ದುಗೊಳಿಸದಂತೆ ಆಗ್ರಹಿಸಿ ತಾ. ೯ ರಂದು ನಗರದಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ನಡೆಯಲಿದೆ ಎಂದು ಪೀಪಲ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ಸಮಿತಿ ಮಾಹಿತಿ ನೀಡಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮಂಗಳೂರು ವಿಭಾಗ ಸಂಚಾಲಕ ಕೆ. ರಮೇಶ್, ನೂತನ ಶಿಕ್ಷಣ ನೀತಿಯಿಂದ ಅನೇಕ ಪ್ರಯೋಜನಗಳಿವೆ. ಇದರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಈ ಹಿಂದಿನ ಸರಕಾರಿ ನೂತನ ಶಿಕ್ಷಣ ನೀತಿ ಅನುಷ್ಠಾನ ಮಾಡಿತ್ತು. ಇದೀಗ ಹೊಸ ಸರಕಾರ ನೀತಿ ರದ್ದುಗೊಳಿಸಿರುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಸಭೆ ನಡೆಸಿ ಸಾಧಕ-ಬಾಧಕ ಕುರಿತು ಚರ್ಚಿಸಲಾಗುತ್ತದೆ. ಪೋಷಕರು ಕೂಡ ಈ ನೀತಿ ಜಾರಿಗೆ ಒಂದಾಗಬೇಕೆAದರು.

ಸAಘಟನೆಯ ಜಿಲ್ಲಾ ಸಂಚಾಲಕ ಜಯಪ್ರಕಾಶ್ ಎಸ್ ತಂಟೆಪಾಡಿ ಮಾತನಾಡಿ, ತಾ. ೯ ರಂದು ನಗರದ ಕಾವೇರಿ ಹಾಲ್‌ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮಂಗಳೂರು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾ ಪಾಲ್ಗೊಳ್ಳಲಿದ್ದು, ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ಕೋಳೇರ ಝರು ಗಣಪತಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಮದೆನಾಡು ವಿ.ಎಸ್.ಎಸ್.ಎನ್. ನಿರ್ದೇಶಕ ಧನಂಜಯ ಅಗೋಳಿಕಜೆ ಹಾಜರಿದ್ದರು.