ಮಡಿಕೇರಿ, ಅ. ೮: ೨೦೨೩-೨೪ನೇ ಸಾಲಿನ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಮಾದಾಪುರದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲು ಅರುವತ್ತೊಕ್ಲುವಿನ ಸರ್ವದೈವತಾ ಪದವಿಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ದೈಹಿಕ ಶಿಕ್ಷಕರು ಹಾಗೂ ತರಬೇತುದಾರರಾದ ವಿ.ಎನ್. ಪ್ರಮೋದ್ ತಿಳಿಸಿದ್ದಾರೆ.