ಮಡಿಕೇರಿ, ಅ. ೭: ಐತಿಹಾಸಿಕ ನಾಡಹಬ್ಬ ದಸರಾ ಹಾಗೂ ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಂಬAಧಿಸಿದAತೆ ಅನುದಾನ ಬಿಡುಗಡೆಗೆ ಸರ್ಕಾರ ಮಂಜೂರಾತಿ ನೀಡಿದೆ. ಮಡಿಕೇರಿ ದಸರಾಕ್ಕೆ ರೂ.೭೫ ಲಕ್ಷ, ಗೋಣಿಕೊಪ್ಪ ದಸರಾಕ್ಕೆ ರೂ. ೫೦ ಲಕ್ಷ ಅನುದಾನವನ್ನು ಷರತ್ತಿಗೊಳಪಟ್ಟು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಬಿಡುಗಡೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಗೀತಾಬಾಯಿ ಆದೇಶ ಹೊರಡಿಸಿದ್ದಾರೆ. ದಸರಾ ಉತ್ಸವಕ್ಕಾಗಿ ಮಂಜೂರಾದ ಹಣವನ್ನು ಅದೇ ಉದ್ದೇಶಕ್ಕೆ ಬಳಸಬೇಕು. ಅನುದಾನ ಸಮರ್ಪಕವಾಗಿ ಬಳಕೆಯಾದ ಬಗ್ಗೆ ಉಪಯುಕ್ತ ಪ್ರಮಾಣ ಪತ್ರ ಸಲ್ಲಿಸಬೇಕು. ಕಾರ್ಯಕ್ರಮ ನಡೆದಿರುವ ಬಗ್ಗೆ ಜಿಲ್ಲಾಧಿಕಾರಿಯವರಿಂದ ಖಾತರಿಪಡಿಸಿಕೊಳ್ಳಬೇಕು. ಹಣ ಬಳಕೆ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿಗಳಿಂದ ಪಡೆಯಬೇಕು. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ೧೯೯೯-೨೦೦೦ ನಿಯಮ ಮತ್ತು ಸರ್ಕಾರ ಆಗಿಂದಾಗ್ಗೆ ಹೊರಡಿಸಿದ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ವೆಚ್ಚವನ್ನು ೨೦೨೩-೨೪ನೇ ಸಾಲಿನ ಲೆಕ್ಕ ಶೀರ್ಷಿಕೆ:೨೨೦೫-೧೦೨-೪-೦೧ ಓಚಿಣioಟಿಚಿಟ & Sಣಚಿಣe & ಆisಣಡಿiಛಿಣ ಈesಣiveಟs ೧೦೩ ಉಡಿಚಿಟಿಣs-iಟಿ-ಚಿiಜ-ಉeಟಿeಡಿಚಿಟರಡಿ ಒದಗಿಸಿರುವ ಅನುದಾನದಿಂದ ಭರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.