ಸೋಮವಾರಪೇಟೆ, ಅ. ೭: ವ್ಯಸನಗಳು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅಪಾಯ ಕಾರಿ. ದುಶ್ಚಟ ಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಜನರ ಅಭ್ಯು ದಯದೊಂದಿಗೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸೋಮವಾರಪೇಟೆ, ಅಖಿಲ ಕರ್ನಾ ಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ‘ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಹಾಗೂ ನವಜೀವನ ಸಮಿತಿ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮದ್ಯಪಾನದಂತಹ ದುಶ್ಟಟವನ್ನು ಹೋಗಲಾಡಿಸಲು ಮದ್ಯವರ್ಜನ ಶಿಬಿರಗಳನ್ನು ಆಯೋ ಜಿಸಿಕೊಂಡು ಬರುತ್ತಿರುವುದರಿಂದ ಇಂದು ಅನೇಕ ಕುಟುಂಬಗಳು ಸಮಾಜದ ಮುಖ್ಯವಾಹಿನಿಗೆ ಬಂದಿದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಮಾತನಾಡಿ, ಗಾಂಧಿ ಕಂಡ ಕನಸ್ಸನ್ನು ನನಸು ಮಾಡುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ರಾಜ್ಯ ಸರಕಾರವು ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದು, ಇದನ್ನು ಎಲ್ಲರೂ ಬಲವಾಗಿ ವಿರೋಧಿಸಬೇಕಾದ ಅಗತ್ಯತೆ ಇದೆ ಎಂದರು.
ವೇದಿಕೆಯಲ್ಲಿ ಪಟ್ಟಣ ಪಂಚಾ ಯಿತಿ ಮುಖ್ಯಾಧಿಕಾರಿ ನಾಚಪ್ಪ, ಅಬ್ಕಾರಿ ನಿರೀಕ್ಷಕ ಲೋಕೇಶ್, ರಾಷ್ಟಿçÃಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಸುರೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಚಂದ್ರಮೋಹನ್, ಉದ್ಯಮಿ ಭಗವಾನ್, ಸೋಮೇಶ್ ಮತ್ತಿತರರು ಉಪಸ್ಥಿತರಿದ್ದರು. ಯೋಜನೆಯ ಜಿಲ್ಲಾ ನಿರ್ದೆಶಕರಾದ ಲೀಲಾವತಿ, ಯೋಜನಾಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಇದಕ್ಕೂ ಮುನ್ನ ಪಟ್ಟಣದ ಗಾಂಧಿ ಪ್ರತಿಮೆ ಬಳಿಯಿಂದ ತಾಲೂಕು ಕಚೇರಿವರೆಗೆ ಜನಜಾಗೃತಿ ಜಾಥಾ ನಡೆಯಿತು. ಮದ್ಯಪಾನವನ್ನು ತೊಲಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಹಶೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.