ಮಡಿಕೇರಿ, ಅ. ೭: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕೊಡಗು ಜಿಲ್ಲಾ ಮಂಡಳಿಯಿAದ ನಗರದಲ್ಲಿ ಜನಾಗ್ರಹ ಚಳವಳಿ ನಡೆಯಿತು.
ಅಜ್ಜಮಾಡ ದೇವಯ್ಯ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿದ ಪ್ರತಿಭಟನಾನಿರತರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಕ್ಕೆ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆ ಯರಿಗೆ ಮಾಸಿಕ ರೂ. ೧೫ ಸಾವಿರ ಮತ್ತು ಸಹಾಯಕಿಯರಿಗೆ ರೂ. ೧೦ ಸಾವಿರ, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. ೮ ಸಾವಿರ, ಅಕ್ಷರ ದಾಸೋಹ ಕಾರ್ಯಕರ್ತರಿಗೆ ರೂ. ೬ ಸಾವಿರ ಗೌರವ ಧನ ಹೆಚ್ಚಿಸಬೇಕು, ಬಿಜೆಪಿ ಸರಕಾರ ಜಾರಿಗೆ ತಂದ ಎಪಿಎಂಸಿ ಕಾಯ್ದೆ ರದ್ದುಗೊಳಿಸಿ ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಪ್ರಕರಣ ರದ್ದುಗೊಳಿಸಬೇಕು, ಪೌರಕಾರ್ಮಿಕರು, ನೀರುಘಂಟಿಗಳ ಕೆಲಸ ಖಾಯಂಗೊಳಿಸಿ, ಸರಕಾರಿ ಸೌಲಭ್ಯ ನೀಡಬೇಕು, ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ಖಾಯಂ ಮಾಡಬೇಕು, ಸರಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು, ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಕೊಡಗಿನಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಸರಕಾರವೇ ಮನೆ ನಿರ್ಮಿಸಿಕೊಡಬೇಕು, ಬರಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮವಹಿಸಬೇಕು, ರೈತರ ಕಡತಗಳನ್ನು ತ್ವರಿತ ವಿಲೇವಾರಿಗೊಳಿಸಿ ಸಾಗುವಳಿ ಚೀಟಿ ನೀಡಬೇಕು, ಸರಕಾರಿ ಕಚೇರಿಗಳಲ್ಲಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು, ವನ್ಯಜೀವಿ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ರೂ. ೨೫ ಲಕ್ಷ ಪರಿಹಾರ ಧನದೊಂದಿಗೆ ಸರಕಾರಿ ಉದ್ಯೋಗ ಒದಗಿಸಬೇಕು, ಪ್ರವಾಹ ಸಂತ್ರಸ್ತರಿಗೆ ನಿವೇಶನ ಕಲ್ಪಿಸಬೇಕು, ಲೈನ್ಮನೆ ವಾಸಿಗಳಿಗೆ ನಿವೇಶನ ನೀಡಬೇಕು. ಕಟ್ಟಡ ಕಾರ್ಮಿಕರಿಗೆ ಅಗತ್ಯ ಸೇವೆಗಳು ಸಿಗುವಂತಾಗಬೇಕೆAದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟರು. ಈ ಸಂದರ್ಭ ಎ.ಐ.ಟಿಯು.ಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋವಪ್ಪ, ಸಿಪಿಐ ಕಾರ್ಯದರ್ಶಿ ಕೆ.ವಿ. ಸುನಿಲ್, ಪ್ರಮುಖರಾದ ರಮೇಶ್ ಮಾಯಮುಡಿ, ಎನ್.ಮಣಿ, ರಫೀಕ್ ನಲಗುಂದ, ಸಿ. ಧರ್ಮರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.