ಮಡಿಕೇರಿ, ಅ. ೮: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ೨೦೨೩-೨೪ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು ೨೦೨೩ ರ ಅಕ್ಟೋಬರ್ ೨೦ ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಇದೇ ಅಕ್ಟೋಬರ್ ೨೦ ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಮಿತಾ ಸುಬ್ಬಯ್ಯ ಹೇಳಿದ್ದಾರೆ.
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲುö್ಯ, ಎಂ.ಎ, ಎಂ.ಸಿ.ಜೆ, ಎಂ.ಕಾA, ಎಂ.ಎಸ್ಸಿ, ಎಂಲಿಬ್ಐಎಸ್ಸಿ, ಎಂಬಿಎ, ಎಂಸಿಎ, ಎಂಎಸ್ಡಬ್ಲುö್ಯ ಮತ್ತು ಪಿಜಿ ಸರ್ಟಿಫಿಕೇಟ್ ಡಿಪ್ಲೊಮಾ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೆಎಸ್ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕ.ರಾ.ಮು.ವಿ ಪ್ರಾದೇಶಿಕ ನಿರ್ದೇಶಕರು, ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ ಮಡಿಕೇರಿ-೫೭೧೨೦೧ ದೂ. ೦೮೨೭೨೨೦೧೧೪೭, ೮೦೭೩೩೪೨೩೧೦, ೭೬೧೮೭೬೩೬೫೪, ೯೧೪೧೯೩೮೮೦೩, ೮೨೯೬೨೧೫೭೧೪, ೯೬೧೧೩೨೦೧೯೧ ನ್ನು ಸಂಪರ್ಕಿಸಬಹುದಾಗಿದೆ.