ಮಡಿಕೇರಿ, ಅ. ೮: ಕೇಂದ್ರ ಸರ್ಕಾರದ ರಾಷ್ಟಿçÃಯ ವಿದ್ಯಾರ್ಥಿ ವೇತನ ಯೋಜನೆಯಡಿ ೨೦೨೩-೨೪ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಪ್ರಿ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ hಣಣಠಿs://sಛಿhoಟಚಿಡಿshiಠಿs.gov.iಟಿ ತಂತ್ರಾAಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿದೆ. ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಡಿಸೆಂಬರ್ ೩೧ ರವರೆಗೆ ಕಾಲಾವಕಾಶವಿದೆ. ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ದೂ.ಸಂ. ೦೮೨೭೨-೨೯೫೮೨೯ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.