ಕೂಡಿಗೆ, ಅ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಬಾಲಕ ಮತ್ತು ಬಾಲಕಿಯರ ಪ್ರಾಥಮಿಕ, ಮತ್ತು ಪ್ರೌಢಶಾಲಾ ವಿಭಾಗದ ಹಾಕಿ ಪಂದ್ಯಾವಳಿ ಕೂಡಿಗೆಯ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಹಾಕಿ ಟರ್ಫ್ ಮೈದಾನದಲ್ಲಿ ಆರಂಭಗೊAಡಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರು ಮತ್ತು ಪ್ರಾಂಶುಪಾಲರಾದ ಎಂ.ಚAದ್ರಕಾAತ್, ಕ್ರೀಡೆಯು ದೈಹಿಕ ಸದೃಢತೆ ಮತ್ತು ಮಾನಸಿಕ ಆರೋಗ್ಯ ಕಾಪಾಡುವುದರೊಂದಿಗೆ ಶಿಸ್ತಿನ ಜೀವನ ಮತ್ತು ಉತ್ತಮ ಬದುಕನ್ನು ರೂಪಿಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಮಾತನಾಡಿ, ಸೈನಿಕರ ಮತ್ತು ಕ್ರೀಡೆಯ ತವರು ಜಿಲ್ಲೆಯಾದ ಕೊಡಗಿನಲ್ಲಿ ಹಾಕಿ ಪಂದ್ಯಾಟಕ್ಕೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿದೆ. ಜಿಲ್ಲೆಯಲ್ಲಿ ಕೊಡವ ಹಾಕಿ ಉತ್ಸವ ಸೇರಿದಂತೆ ವಿವಿಧೆಡೆ ಹಾಕಿ ಟೂರ್ನಿಗಳು ನಿರಂತರವಾಗಿ ನಡೆಯುತ್ತಿರುವುದು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ ಎಂದರು.ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸೌಮ್ಯ ಪೊನ್ನಪ್ಪ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಡಿಸೆಂಬರ್ ವೇಳೆಗೆ ನಡೆಯಲಿರುವ ರಾಷ್ಟಿçÃಯ ಬಾಲಕಿಯರ ಹಾಕಿ ಟೂರ್ನಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಹಾಕಿ ಪಂದ್ಯಾವಳಿಯಲ್ಲಿ ಕಲಬುರ್ಗಿ, ಬೆಳಗಾವಿ, ಬೆಂಗಳೂರು, ಮೈಸೂರು ವಿಭಾಗಗಳ ವಿಜೇತ ತಂಡಗಳು ಭಾಗವಹಿಸಿದ್ದವು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ರಾಜ್ಯಮಟ್ಟದ ಹಾಕಿ ಟೂರ್ನಿಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಕ್ರೀಡೆಯನ್ನು ಪ್ರೋತ್ಸಾಹಿಸಬೇಕು ಎಂದರು. ಪ್ರಬಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮAಜೇಶ್, ವಿದ್ಯಾರ್ಥಿಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು.

ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ.ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎ. ಪ್ರವೀಣ್ , ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಎ.ಪಿ. ಸೋಮಯ್ಯ, ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯ ಮುಖ್ಯೋಪಾಧ್ಯಾಯ ಬಿ.ಟಿ. ದೇವಕುಮಾರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಶಿಕ್ಷಕ ಉ.ರಾ. ನಾಗೇಶ್ ಕಾರ್ಯಕ್ರಮ ನಿರೂಪಿಸಿ ಶಿಕ್ಷಕ ಹರೀಶ್ ಪ್ರಾರ್ಥಿಸಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್ ಸ್ವಾಗತಿಸಿದರು. ತಾಲೂಕು ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ವಂದಿಸಿದರು.