ಮಡಿಕೇರಿ, ಅ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ಮಡಿಕೇರಿ, ಎಸ್ವಿವೈಎಂ, ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬ ಘೋಷವಾಕ್ಯದಡಿ ತಾ. ೧೦ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ.