ಮಡಿಕೇರಿ, ಅ. ೯: ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಐಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಕುಡಿಯುವ ನೀರು ಸಂಪರ್ಕ, ತಡೆಗೋಡೆ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೋರಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮಾತನಾಡಿ, ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಸಮಾಡುವ ಪರಿಶಿಷ್ಟರಿಗೆ ಭೂಮಿ ಸಂಬAಧ ನಿವೇಶನ ಹಕ್ಕು ಪತ್ರ ಇಲ್ಲದವರಿಗೆ ನಿವೇಶನ ಹಕ್ಕುಪತ್ರ ನೀಡುವಂತಾಗ ಬೇಕು. ಇದರಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ, ಅಂಗನವಾಡಿ ಮತ್ತಿ ತರ ಮೂಲ ಸೌಲಭ್ಯ ಪಡೆಯಲು ಸಾಧ್ಯ. ಇಂತಹ ಬಡಾವಣೆಗಳನ್ನು ಗುರುತಿಸಿ ನಿವೇಶನ ಹಕ್ಕು ಪತ್ರ ನೀಡುವಂತಾ ಗಬೇಕು ಎಂದು ಮನವಿ ಮಾಡಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಜಾಯ್ಸ್ ಮೆನೇಜಸ್ ಮಾತನಾಡಿ, ಬಾಳೆಗುಂಡಿಯಲ್ಲಿ ೯೫ ಕುಟುಂಬಗಳು ವಾಸಮಾಡುತ್ತಿದ್ದು, ಈ ಕುಟುಂಬ ಗಳಿಗೆ ಪಡಿತರ ಚೀಟಿ ಒದಗಿಸು ವಂತಾಗಬೇಕು ಎಂದರು.
ಸದಸ್ಯ ಪಿ.ಪಿ. ಸುಕುಮಾರ್ ಅವರು ಮಾತನಾಡಿ, ಪರಿಶಿಷ್ಟ ಕುಟುಂಬಗಳಿಗೆ ಹಲವು ಮೂಲ ಸೌಲಭ್ಯಗಳು ದೊರೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಸಮಿತಿ ಸಭೆಗೆ ಸಮಿತಿ ಸದಸ್ಯರು ನೀಡಿರುವ ಹಲವು ಸಲಹೆಗಳನ್ನು ಪರಿಗಣಿಸಿ, ತ್ವರಿತ ಇತ್ಯರ್ಥಕ್ಕೆ ಇಲಾಖೆಗಳು ಆದ್ಯತೆ ಮೇಲೆ ಗಮನಹರಿಸಬೇಕು. ಸಕಾಲದಲ್ಲಿ ಸ್ಪಂದಿಸುವAತಾಗಬೇಕು ಎಂದು ಸೂಚಿಸಿದರು.
ಜಿ.ಪಂ. ಸಿಇಓ ವರ್ಣಿತ್ ನೇಗಿ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಹಾಗೂ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು. ಆ ನಿಟ್ಟಿನಲ್ಲಿ ಆಯಾಯ ಗ್ರಾ.ಪಂ. ವ್ಯಾಪ್ತಿಗೆ ಪಟ್ಟಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ಸಮಿತಿ ಸದಸ್ಯ ರಂಗಸ್ವಾಮಿ ಅವರು ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನ ನೀಡಬೇಕು. ಜೊತೆಗೆ ೨೦-೩೦ ವರ್ಷಗಳಿಂದ ಗ್ರಾ.ಪಂ. ವ್ಯಾಪ್ತಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಮಾಡಬೇಕು ಎಂದು ಕೋರಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮ್ಯಾನ್ಯು ವಲ್ ಸ್ಕಾö್ಯವೆಂರ್ಸ್ ಸಂಬAಧಿಸಿದAತೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಬೇಕಿದೆ. ಗುರುತಿನ ಚೀಟಿ ನೀಡುವುದು, ಶಾಲಾ-ಕಾಲೇಜು ಪ್ರವೇಶಕ್ಕೆ ಉಚಿತ ಅವಕಾಶ ಕಲ್ಪಿಸುವುದು, ಶಿಷ್ಯವೇತನ ಪಾವತಿ ಸುವುದು, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳ ವಿದ್ಯಾಭ್ಯಾಸ ಸಂಬAಧ ಪ್ರವೇಶ ಪರೀಕ್ಷೆ ಇಲ್ಲದೆ ವಸತಿ ಶಾಲೆಗಳ ಪ್ರವೇಶಕ್ಕೆ ಅವಕಾಶ ಮಾಡುವುದು. ಗ್ರಾಮೀಣ ಪ್ರದೇಶದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮತ್ತು ಪಟ್ಟಣ/ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅವಕಾಶ ಮಾಡುವುದು. ಮತ್ತಿತರ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಒದಗಿಸಬೇಕಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತ ನಾಡಿದ ಜಿ.ಪಂ.ಸಿಇಓ ವರ್ಣಿತ್ ನೇಗಿ ಅವರು ಸಫಾಯಿ ಕರ್ಮಚಾರಿಗಳಿಗೆ ಕಾನೂನು ನೆರವು ನೀಡುವುದರ ಜೊತೆಗೆ, ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕಿದೆ ಎಂದು ಹೇಳಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.