ಮಡಿಕೇರಿ, ಅ. ೯ : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ತಾ. ೧೭ ರಂದು ರಾತ್ರಿ ೧.೨೭ ನಿಮಿಷಕ್ಕೆ (೧೮ ರ ಬೆಳಗ್ಗೆ) ಶ್ರೀ ಕಾವೇರಿ ತೀರ್ಥೋದ್ಭವ ಜರುಗಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು, ಯಾತ್ರಾರ್ಥಿಗಳು ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‌ಗಳನ್ನು ಬಳಕೆ ಮಾಡುತ್ತಾರೆ. ಆದರೆ ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ನಿರ್ಬಂಧಿಸುವAತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಸುತ್ತೋಲೆಯಲ್ಲಿ ಸೂಚಿಸಿರುವುದಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುವುದನ್ನು ನಿಷೇದಿಸಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.