ಮಡಿಕೇರಿ, ಅ. ೯ : ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಲಮಿತಿಯಲ್ಲಿ ನಿಯಮಾನುಸಾರ ಬಳಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಸಂಬAಧಿಸಿದAತೆ ಮಾಹಿತಿ ಪಡೆದು ಅವರು ಮಾತನಾಡಿದರು.

ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಪ್ರತೀ ಇಲಾಖೆಗೂ ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳು, ಸೌಲಭ್ಯಗಳು ನಿಗಧಿಯಾಗಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಕಲಾವಿದರಿಗೆ ಆದ್ಯತೆ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ವಿವಿಧ ಇಲಾಖೆಯ ಪ್ರಗತಿ ಸಂಬAಧಿಸಿದAತೆ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸಂದರ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸನ್ನ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾಂಜಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಬಿಂದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ದನ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಉಮಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇ±ಕಿ ವಿಸ್ಮಯಿ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕ ರಘು, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.