ಮಡಿಕೇರಿ, ಅ. ೧೦: ಮೂರ್ನಾಡು ಪದವಿ ಕಾಲೇಜಿನ ೨೦೨೩-೨೪ನೇ ಸಾಲಿನ ಎನ್.ಎಸ್. ಎಸ್. ಘಟಕವನ್ನು ಉದ್ಘಾಟಿಸ ಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ ಜಿ. ಮಾದಪ್ಪ ವಹಿಸಿದ್ದರು. ಅತಿಥಿಗಳಾಗಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಡಿ. ಪ್ರಶಾಂತ್ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ ಎನ್.ಎಸ್.ಎಸ್. ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕಿ ಹಾಗೂ ಎನ್.ಎಸ್.ಎಸ್ ಅಧಿಕಾರಿ ಕಲ್ಪನಾ ಪ್ರಸ್ತಾವಿಕ ನುಡಿ ಯನ್ನಾಡಿದರು.

ಈ ಸಂದರ್ಭ ೨೦೨೩-೨೪ನೇ ಸಾಲಿನ ಮೊದಲ ಸೆಮಿಸ್ಟರ್‌ನ ಕಾಲೇಜಿನ ನ್ಯೂಸ್ ಲೆಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು, ವಿವಿಧ ವಿಭಾಗದ ಮುಖ್ಯಸ್ಥರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.