ಸಿದ್ದಾಪುರ, ಅ. ೧೧: ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾವಳಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯಲ್ಲಿ ವೀರಾಜಪೇಟೆ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭವ್ಯ ಟಿ.ಪಿ. ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಇವರು ಸಿದ್ದಾಪುರ ಸಮಿಪದ ಇಂಜಿಳಗೆರೆ ನಿವಾಸಿ ಟಿ.ಎ. ಪ್ರಕಾಶ್ (ಮಾಜಿ ಸೈನಿಕ) ಹಾಗೂ ಟಿ.ಪಿ. ದಿವ್ಯ ದಂಪತಿ ಪುತ್ರಿ. ಭವ್ಯ ಅಮ್ಮತ್ತಿಯ ಝೆನ್ ಶಿಟೋರಿಯೋ ಕರಾಟೆ ಫೆಡರೇಶನ್‌ನ ತರಬೇತುದಾರ ಪ್ರಸನ್ನ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.