*ಗೋಣಿಕೊಪ್ಪ, ಅ. ೧೦: ತಾ. ೨೪ ರಂದು ನಡೆಯುವ ಗೋಣಿಕೊಪ್ಪ ದಸರಾ ಕಾರ್ಯಕ್ರಮದಲ್ಲಿ ಸ್ತಬ್ಧ ಚಿತ್ರ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಗೌರವ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ತಿಳಿಸಿದ್ದಾರೆ.

೩೪ ನೇ ವರ್ಷದ ಮೆರವಣಿಗೆ ಕಾರ್ಯಕ್ರಮವು ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಿಂದ ಮಧ್ಯಾಹ್ನ ೨ ಗಂಟೆಗೆ ಆರಂಭಗೊAಡು, ಪಟ್ಟಣದ ಮುಖ್ಯ ಬೀದಿಯಲ್ಲಿ ಸಾಗಿ ಬರಲಿದೆ. ಇದರೊಂದಿಗೆ ಚಿಲಿಪಿಲಿ ಗೊಂಬೆಯಾಟ, ವಿವಿಧ ಕಲಾಕೃತಿಗಳು ಇರಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿಯಿತ್ತರು.

ಸಾಮಾಜಿಕ ಸಂದೇಶ, ಪ್ರಸ್ತುತ ವಿದ್ಯಮಾನ, ಧಾರ್ಮಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳು ಪಾಳ್ಗೊಳ್ಳಲಿವೆ. ಮೂರು ಚಿತ್ರಗಳಿಗೆ ಬಹುಮಾನ ನೀಡಲಾಗುವುದು. ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಪಾಲ್ಗೊಳ್ಳುವಿಕೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಸುಮಾರು ೨೭ ಇಲಾಖೆಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿವಿಧ ಸಂಘ-ಸAಸ್ಥೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ನಗದು, ಪಾರಿತೋಷಕ ನೀಡಲಾಗುವುದು ಎಂದರು.

ಉದ್ಘಾಟನೆಯನ್ನು ಎಂಎಲ್‌ಸಿ ಸುಜಾ ಕುಶಾಲಪ್ಪ ನೆರವೇರಿಸಲಿದ್ದಾರೆ. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕಮನೆ ಸೌಮ್ಯಬಾಲು, ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾವೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೊಳ್ಳಿಮಾಡ ಅಜಿತ್‌ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸ್ತಬ್ಧಚಿತ್ರ ಮೆರವಣಿಗೆಗೆ ಹೆಚ್ಚು ಖರ್ಚು ಕೂಡ ಇರಲಿದೆ. ಪ್ರತ್ಯೇಕ ಅನುದಾನ ನೀಡುವಂತೆ ಕಾವೇರಿ ದಸರಾ ಸಮಿತಿ ಹಾಗೂ ಶಾಸಕ ಎ. ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ಇದರಿಂದ ಸ್ಪರ್ಧಿಗಳಿಗೆ ಪ್ರೋತ್ಸಾಹಧನ ನೀಡಲು ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಗೌರವ ಅಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ, ಅಧ್ಯಕ್ಷ ಕಂಜಿತAಡ ಪ್ರವೀಣ್, ಉಪಾಧ್ಯಕ್ಷ ಸುನಿಲ್ ಪ್ರಭಾಕರ್, ಕಾರ್ಯದರ್ಶಿ ಸುದರ್ಶನ್ ಇದ್ದರು.