ಮಡಿಕೇರಿ, ಅ. ೧೦ : ಮಡಿಕೇರಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್ ನಗರಸಭಾ ನೌಕರರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ; ನೌಕರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಗರಸಭಾ ನೌಕರರು ಇಂದು ನಗರಸಭೆ ಮುಂಭಾಗ ಬೆಳಗ್ಗಿನಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಿದರು.

ನಿನ್ನೆ ದಿನ ಸಂಜೆ ೪.೩೦ರ ಸಮಯದಲ್ಲಿ ಸತೀಶ್ ಅವರು ಪೌರಾಯುಕ್ತರ ಕೊಠಡಿಗೆ ತೆರಳಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪ್ರತಿಭಟನಾ ಕಾರರು ಆಪಾದಿಸಿದರು. ನಗರಸಭೆ ಯಲ್ಲಿ ಸಿಬ್ಬಂದಿಗಳ ಕೊರತೆಯ ನಡು ವೆಯೂ ಇರುವಂತಹ ಸಿಬ್ಬಂದಿಗಳು ಖಾಲಿ ಹುದ್ದೆಯ ಕೆಲಸಗಳನ್ನು ಕೂಡ ನಿರ್ವಹಿಸುತ್ತಿದ್ದಾರೆ. ಆದರೆ ನಗರಸ ಭೆಯ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಆದ್ದರಿಂದ ಸಿಬ್ಬಂ ದಿಗೆ ರಕ್ಷಣೆ ಒದಗಿಸಬೇಕು. ಇಲ್ಲವಾ ದರೆ ಸಾಮೂಹಿಕವಾಗಿ ಬೇರೆಡೆಗೆ ವರ್ಗಾವಣೆಗೊಳಿಸಬೇಕೆಂದು ಪ್ರತಿ ಭಟನಾಕಾರರು ಒತ್ತಾಯಿಸಿದರು. ಕರ್ನಾ ಟಕ ಪೌರಸೇವಾ ನೌಕರರ ಸಂಘ ದಿಂದ ಮಡಿಕೇರಿ ಶಾಖೆಯಿಂದ ನಡೆದ ಪ್ರತಿಭಟನೆಯಲ್ಲಿ ನಗರಸಭಾ ನೌಕ ರರು ಕಪ್ಪುಪಟ್ಟಿ ಧರಿಸಿ ಪಾಲ್ಗೊಂ ಡಿದ್ದರು. ಬಳಿಕ ಜಿಲ್ಲಾಧಿಕಾರಿ ಹಾಗೂ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ನಡೆಯಲಿಲ್ಲ. ಪೌರಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಸತೀಶ್ ಉಪಸ್ಥಿತಿಯಲ್ಲಿ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ನಗರಸಭೆ ಆಡಳಿತ ಮಂಡಳಿ ಹಾಗೂ ಸಂಘದ ಪ್ರಮುಖರ ನಡುವೆ ಸಂಧಾನ ಸಭೆ ನಡೆದು ಪ್ರಕರಣವನ್ನು ಇತ್ಯರ್ಥ ಪಡಿಸಲಾಯಿತು.