ಮಡಿಕೇರಿ, ಅ. ೧೧: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ೨.೫೦ ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಮಾರ್ಕ್ಸ್ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನಾಪೈಡ್ ಪ್ರಮಾಣ ಪತ್ರ (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ಶುಲ್ಕ ರಶೀದಿ (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ತಂದೆ, ತಾಯಿ, ಪೋಷಕರ ಆಧಾರ್ ಪ್ರತಿ ದಾಖಲಾತಿಗಳೊಂದಿಗೆ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕು.
ಆದಾಯ ಮಿತಿ ರೂ. ೨.೫೦ ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿಆರ್ಕೆ ಕೋರ್ಸ್ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು, ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ. ೧೦೦ ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.
ವೆಬ್ಸೈಟ್ ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೦೮೦-೪೪೫೫೪೪೫೫ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇವರ ಕಚೇರಿ ದೂ. ೯೪೮೦೮೪೩೧೫೬/ ೦೮೨೭೬-೨೮೧೧೧೫ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.