ಮಡಿಕೇರಿ, ಅ. ೧೦: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನವೆಂಬರ್ ೧೫ ರೊಳಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ. ಉದಯ ಕುಮಾರ್ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಕನ್ನಡ ಮಾಧ್ಯಮದಲ್ಲಿ ಶೇ. ೮೦ ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ. ೯೦ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ. ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಹಾಗೂ ಸಿ.ಇ.ಟಿ.ಯಲ್ಲಿ ೧೦೦೦ ರ‍್ಯಾಂಕ್ ಒಳಗೆ, ಎನ್.ಇ.ಇ.ಟಿ.ಯಲ್ಲಿ ರಾಷ್ಟçಮಟ್ಟದಲ್ಲಿ ೫೦೦೦ ಒಳಗೆ ರ‍್ಯಾಂಕ್ ಗಳಿಸಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳು ೨೦೨೩ ನ. ೧೫ ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ವೈದ್ಯಕೀಯ, ಇಂಜಿನಿಯರಿAಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟç ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ೨೦೨೩ ನ. ೧೫ ರೊಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕೆಂದು ನವೀನ್ ಹಾಗೂ ಉದಯ ಕುಮಾರ್ ತಿಳಿಸಿದ್ದಾರೆ.