ಮಡಿಕೇರಿ, ಅ. ೧೦: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-೨೦೨೩ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್, ೧೫ ರಿಂದ ೨೩ ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-೨೦೨೩”ನ್ನು ಓವಲ್‌ಗ್ರೌಂಡ್ ಹಳೆಯ ಡಿ.ಸಿ. ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ. ೧,೦೦೦ ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು-ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ತಾ. ೧೨ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ ಞಚಿಟಿಟಿಚಿಜಚಿಠಿಠಿಡಿಚಿಜhiಞಚಿಡಿಚಿ@gmಚಿiಟ.ಛಿomರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ೬೦ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ೫೬೦೦೦೨ ದೂ: ೦೮೦-೨೨೪೮೪೫೧೬ - ೨೨೧೦೭೭೦೪ ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್‌ಸಿಂಗ್ ಅವರು ತಿಳಿಸಿದ್ದಾರೆ.