ಕೂಡಿಗೆ ಆ. ೧೦. ನೂರೊಂದು ನೆನಪು ಸಮ್ಮಿಲನ ಕಾರ್ಯಕ್ರಮದಲ್ಲಿ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರ ಮಡಿಕೇರಿಯಲ್ಲಿ ೧೯೯೪ನೇ ಸಾಲಿನ ಪ್ರಶಿಕ್ಷಣಾರ್ಥಿಗಳಿಂದ ಕಾಲೇಜಿನ ಪ್ರಾಂಶುಪಾಲರಿಗೆ ಗುರುವಂದನಾ ಸಮಾರಂಭವನ್ನು ಯಡವನಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾಗಿದ್ದ ಬೆಳ್ಳಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾಗಿದ್ದ ಪೂಳಕಂಡ ಮುತ್ತಪ್ಪ ಅವರ ಮಗ ಸಂದೀಪ್ ಮುತ್ತಪ್ಪ, ಕಾಲೇಜಿನ ಉಪನ್ಯಾಸಕರಾಗಿದ್ದ ಉಷಾದೇವಿ, ಸರೋಜಿನಿ ಶೆಟ್ಟಿ ಮೀನಾಕ್ಷಿಯವರನ್ನು ಈ ಸಂದರ್ಭ ಗೌರವಿಸಲಾಯಿತು. ಅಗಲಿರುವ ಶಿಕ್ಷಕರಿಗೂ ಸಂತಾಪ ಸೂಚಿಸಲಾಯಿತು. ವೇದಿಕೆಯಲ್ಲಿನ ಗಣ್ಯದಿಂದ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪ್ರಾಸ್ತಾವಿಕವಾಗಿ ಟಿ.ಆರ್. ರಮೇಶ್ ಮಾತನಾಡಿದರು.
ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪರಿಸರ ಕಾಳಜಿ, ಪ್ರಾಮಾಣಿಕತೆ, ಸೇವಾ ಮನೋಭಾವ, ಉತ್ತಮ ಸಂಸ್ಕಾರ ಗಳನ್ನು ಮೈಗೂಡಿಸಿಕೊಳ್ಳುವಂತೆ, ಮಕ್ಕಳು ಕ್ರಿಯಾಶೀಲರಾಗಿ ಸಾಮಾಜಿಕ ಪರಿಸ್ಥಿತಿಗಳನ್ನು ಎದುರಿಸಿ ಸಕಾರಾತ್ಮಕ ಆಲೋಚನೆಗಳನ್ನು ಮಾಡುವಂತೆ ಹಾಗೂ ಜೀವನದಲ್ಲಿ ಸರಿಯಾದ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿದರು.
ಈ ಸಂದರ್ಭ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರನ್ನು ಗೌರವಿಸಲಾಯಿತು. ಮೃತರಾದ ಶಿಕ್ಷಕರ ಕುಟುಂಬದ ಸದಸ್ಯರುಗಳನ್ನು ಗೌರವಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಅವರನ್ನು ಸನ್ಮಾನಿಸಲಾಯಿತು. ಅನುಭವ ಹಂಚಿಕೊAಡAತಹ ದೇವರಾಜ್ ಮತ್ತು ಸುಬ್ರಮಣ್ಯ ಅವರುಗಳು ಈ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದುಕೊಂಡು ಏನೆಲ್ಲಾ ಸಾಧಿಸಲು ಸಾಧ್ಯವಾಗಿದೆ ಎಂಬುದನ್ನು ತಿಳಿಸಿ, ಗುರುಗಳ ಮಾರ್ಗದರ್ಶನವನ್ನು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬೆಳ್ಳಿಯಪ್ಪ ಮಾತನಾಡಿದರು. ೨೯ ವರ್ಷಗಳ ನಂತರ ಎಲ್ಲರನ್ನು ಒಟ್ಟುಗೂಡಿಸಿದಂತಹ ಶಿಕ್ಷಕರುಗಳಿಗೆ ವಂದನೆಗಳನ್ನು ಹೇಳುವ ಮುಖಾಂತರ ಎಲ್ಲಾ ಶಿಕ್ಷಕ ಸಹಪಾಠಿಗಳ ಸಮ್ಮಿಲನದೊಂದಿಗೆ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ಮಹೇಶ್ ನಿರೂಪಿಸಿ, ಶಿಕ್ಷಕಿ ವನಜ ಸ್ವಾಗತಿಸಿ, ಶಿಕ್ಷಕ ಮಂಜುನಾಥ ವಂದಿಸಿದರು.