ಕುಶಾಲನಗರ, ಅ. ೧೧: ನದಿ, ಪರಿಸರ, ಪ್ರಕೃತಿ ಉಳಿದಲ್ಲಿ ಮಾತ್ರ ಮಾನವ ಮತ್ತು ಪ್ರಾಣಿ ಸಂಕುಲ ಉಳಿಯಲು ಸಾಧ್ಯ ಎಂದು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ನಡೆದ ಮರ-ಗಿಡಗಳ ಹುಟ್ಟುಹಬ್ಬ ಆಚರಣೆ ಮತ್ತು ವೃಕ್ಷಮಾತೆ, ಪರಿಸರ ರಾಯಭಾರಿ, ಪದ್ಮಶ್ರೀ ಪುರಸ್ಕೃತ ಡಾ. ಸಾಲುಮರ ತಿಮ್ಮಕ್ಕ ಅವರ ಆರೋಗ್ಯ ಚೇತರಿಸಿಕೊಳ್ಳುವ ಸಲುವಾಗಿ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಜಲಮೂಲಗಳ ಸ್ವಚ್ಛತೆ, ಪ್ರಕೃತಿಯ ಆರಾಧನೆ ಮತ್ತು ಗಿಡ-ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆ ಸಾಧ್ಯ ಎಂದು ರಂಜನ್ ಹೇಳಿದರು.

ಈ ಸಂಬAಧ ಕಳೆದ ಹಲವಾರು ವರ್ಷಗಳಿಂದ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ ನೂರಾರು ಗಿಡಗಳನ್ನು ನೆಟ್ಟು ಅವುಗಳನ್ನು ನಿರ್ವಹಣೆ ಮಾಡುತ್ತಿರುವ ಚಂದ್ರಮೋಹನ್ ನೇತೃತ್ವದ ಕಾವೇರಿ ಪರಿಸರ ರಕ್ಷಣಾ ಬಳಗದ ಪ್ರಮುಖರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ ಹಿರಿಯರಾದ ಸಾಹಿತಿ ಬಾಚರಣಿಯಂಡ ಪಿ. ಅಪ್ಪಣ್ಣ ಮಾತನಾಡಿ, ಹಿಂದಿನ ಕಾಲದಲ್ಲಿ ಮರ ಗಿಡಗಳನ್ನು ದೇವರು ಎಂದು ಪೂಜಿಸುವ ಮೂಲಕ ಕಾಡಿನ ಸಂರಕ್ಷಣೆ ಕಾಳಜಿ ವಹಿಸುತ್ತಿದ್ದ ಬಗ್ಗೆ ತಿಳಿಸಿದರು. ನಿವೃತ್ತ ಮುಖ್ಯ ಶಿಕ್ಷಕರಾದ ಎಂ.ಹೆಚ್. ನಜೀರ್ ಅಹಮದ್ ಮಾತನಾಡಿ, ಮಕ್ಕಳಿಗೆ ಗಿಡ ಮರಗಳ ಕುರಿತು ಅರಿವು ಮೂಡಿಸಬೇಕಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಹಸ್ತಾಂತರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕುಶಾಲನಗರ ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ್, ಹಿರಿಯ ಸದಸ್ಯರಾದ ಪ್ರಮೋದ್ ಮುತ್ತಪ್ಪ ಮತ್ತು ಕುಶಾಲನಗರ ಡಿ.ವೈ.ಎಸ್.ಪಿ. ಆರ್.ವಿ. ಗಂಗಾಧರಪ್ಪ ಅವರುಗಳು ಮಾತನಾಡಿ, ಪ್ರಕೃತಿಯ ಆರಾಧನೆಯೊಂದಿಗೆ ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬಕ್ಕೆ ಗಿಡ ನೆಟ್ಟು ಸಂಭ್ರಮಿಸುವAತೆ ಮನವಿ ಮಾಡಿದರು.

ಸಭೆಯಲ್ಲಿ ಗಿಡ-ಮರಗಳ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ವೃಕ್ಷಮಾತೆ ಸಾಲುಮರ ತಿಮ್ಮಕ್ಕ ಅವರ ಆರೋಗ್ಯ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಸಾಲುಮರ ತಿಮ್ಮಕ್ಕ ಅವರ ಸಾಧನೆಗಳು ಮತ್ತು ಅವರಿಗೆ ಇದುವರೆಗೆ ಲಭಿಸಿರುವ ರಾಷ್ಟಿçÃಯ, ಅಂರ‍್ರಾಷ್ಟಿçÃಯ ಪ್ರಶಸ್ತಿಗಳ ಬಗ್ಗೆ ಮಾಹಿತಿ ಒದಗಿಸಿದರು. ಪಟ್ಟಣ ವ್ಯಾಪ್ತಿಯಲ್ಲಿ ನೆಟ್ಟು ಬೆಳೆಸಿದ ಗಿಡ-ಮರಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಕುಶಾಲನಗರ ಕೊಪ್ಪ ಗಡಿಭಾಗದಲ್ಲಿರುವ ೧೭೭ ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಸೇತುವೆಯನ್ನು ಸಂರಕ್ಷಿಸುವುದರೊAದಿಗೆ ಅದರ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಸಭೆಯಲ್ಲಿದ್ದ ಪುರಸಭೆ ಪ್ರಮುಖರ ಮೂಲಕ ಮನವಿ ಮಾಡಿದರು. ಈ ಸಂದರ್ಭ ನಡೆದ ಸರಳ ಕಾರ್ಯಕ್ರಮದಲ್ಲಿ ಕುಶಾಲನಗರ ಮತ್ತು ನೆರೆಯ ರಾಮನಾಥಪುರದ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು, ಬಳಗದ ಸದಸ್ಯರು, ಪರಿಸರ ಪ್ರೇಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಪಾಲ್ಗೊಂಡ ಸರ್ವರಿಗೂ ಬಳಗದ ವತಿಯಿಂದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ತ್ರಿಶ್ಯ ಸುನಿಲ್ ಪ್ರಾರ್ಥಿಸಿದರು. ಟಿ.ಆರ್. ಪ್ರಭುದೇವ್ ಕಾರ್ಯಕ್ರಮ ನಿರೂಪಿಸಿದರು. ಕೊಡಗನ ಹರ್ಷ ವಂದಿಸಿದರು.