ಸೋಮವಾರಪೇಟೆ, ಅ. ೧೧: ಜಿಲ್ಲಾ ರಕ್ತನಿಧಿ ಕೇಂದ್ರ, ತಥಾಸ್ತು ಸಾತ್ವಿಕ ಸಂಸ್ಥೆ ಹಾಗೂ ಅಬಕಾರಿ ನಿರೀಕ್ಷಕರ ಕಚೇರಿ ಇವುಗಳ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸತೀಶ್ ಚಾಲನೆ ನೀಡಿದರು. ನಂತರ ಮಾತನಾಡಿ, ಸಂಘ ಸಂಸ್ಥೆಗಳು ಕಾಲ ಕಾಲಕ್ಕೆ ರಕ್ತದಾನದಂತಹ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿ ರುವುದರಿಂದ ಜಿಲ್ಲೆಯಲ್ಲಿನ ರಕ್ತದ ಕೊರತೆಯನ್ನು ಆದಷ್ಟು ನೀಗಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಇಂತಹ ಕಾರ್ಯಕ್ರಮ ಗಳು ನಡೆಸಲು ಮುಂದಾಗ ಬೇಕೆಂದರು. ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ಜಿಲ್ಲೆಯಲ್ಲಿ ಮಾಸಿಕ ಸುಮಾರು ೫೦೦ ಯೂನಿಟ್ ರಕ್ತಕ್ಕೆ ಬೇಡಿಕೆ ಇದ್ದು, ಪೂರ್ಣ ಪ್ರಮಾಣ ದಲ್ಲಿ ಸಿಗುತ್ತಿಲ್ಲ. ಇನ್ನೂ ರಕ್ತದಾನದ ಬಗ್ಗೆ ಜನರಿಗೆ ಅರಿವಿನ ಕೊರತೆ ಇದೆ. ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತ ದಾನ ಮಾಡಿದಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳುವುದರೊಂದಿಗೆ, ಮತ್ತೊಬ್ಬರ ಜೀವ ಕಾಪಾಡಿದಂತಾಗುತ್ತದೆ ಎಂದರು. ಸಂಘ-ಸAಸ್ಥೆಗಳು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ರಕ್ತ ಸಂಗ್ರಹಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಇವರೊಂದಿಗೆ ಕೆಲವು ಗ್ರಾಮ ಪಂಚಾಯಿತಿಗಳಲ್ಲೂ ರಕ್ತದಾನ ಶಿಬಿರ ನಡೆಸುತ್ತಿದ್ದಾರೆ. ಎಲ್ಲ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಕೇಂದ್ರಗಳಿAದ ರಕ್ತದಾನ ಶಿಬಿರಗಳನ್ನು ನಡೆಸುವಂತಾಗಬೇಕು. ಹಾಗಾದಲ್ಲಿ ಮಾತ್ರ ನಮಗೆ ಅವಶ್ಯಕತೆ ಇರುವಷ್ಟು ರಕ್ತದ ಸಂಗ್ರಹ ಮಾಡಲು ಸಾಧ್ಯ ಎಂದರು.

ಶಿಬಿರದ ಅಧ್ಯಕ್ಷತೆಯನ್ನು ತಥಾಸ್ತು ಸಾತ್ವಿಕ ಸಂಸ್ಥೆಯ ಅಧ್ಯಕ್ಷ ಉದಯ್ ಮಾಳವೀಯ ವಹಿಸಿದ್ದರು. ವೇದಿಕೆಯಲ್ಲಿ ಅಬಕಾರಿ ಇಲಾಖೆಯ ನಿರೀಕ್ಷಕ ಲೋಕೇಶ್ ಸುವರ್ಣ ಇದ್ದರು.