ಕೂಡಿಗೆ, ಅ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಶ್ರೀ ಮಹಾದೇವಿ ಸನ್ನಿಧಿಯಲ್ಲಿ ತಾ. ೧೫ ರಿಂದ ೨೩ರವರೆಗೆ ನವರಾತ್ರಿ ಪೂಜೋತ್ಸವ ಕಾರ್ಯಕ್ರಮ ನಡೆಯಲಿದೆ.
ಇದರ ಅಂಗವಾಗಿ ದೇವಾಲಯ ಆವರಣದಲ್ಲಿ ಪ್ರತಿ ದಿನ ಸಂಜೆ ೭ ಗಂಟೆಯಿAದ ೮ ಗಂಟೆಯವರೆಗೆ ಭಕ್ತ ವೃಂದದವರ ಸಹಕಾರದೊಂದಿಗೆ ಲಲಿತ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ದಿನಂಪ್ರತಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ ತಿಳಿಸಿದ್ದಾರೆ.