ಮಡಿಕೇರಿ, ಅ. ೧೧ : ಮಡಿಕೇರಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಭಾಗಮಂಡಲ ಫೀಡರ್‌ನಲ್ಲಿ ತುಲಾ ಸಂಕ್ರಮಣ ಕಾವೇರಿ ತೀರ್ಥೋದ್ಭವ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸ ಬೇಕಿರುವುದರಿಂದ ತಾ. ೧೨ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ತಾಳತ್ತ್ಮನೆ, ಬೆಟ್ಟಗೇರಿ, ಅಪ್ಪಂಗಳ, ಚೇರಂಬಾಣೆ, ಕೋಪಟ್ಟಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.