ಮಡಿಕೇರಿ, ಅ. ೧೨: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ ವತಿಯಿಂದ ವೀರಾಜಪೇಟೆ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.
ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು.
ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತç, ಶಸ್ತç ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತಿçà ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆ ನೀಡಲಾಯಿತು.
ಈ ಶಿಬಿರದಲ್ಲಿ ಸುಮಾರು ೪೦೦ಕ್ಕಿಂತ ಹೆಚ್ಚು ಹೊರ ರೋಗಿಗಳು ವೈದ್ಯರ ಭೇಟಿ, ೦೮ ಯುಡಿಐಡಿ ಕಾರ್ಡ್ಗಳು, ೧೮೦ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡ ಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗೆ ವೈದ್ಯಕೀಯ ಕಾಲೇಜು ಮಡಿಕೇರಿಗೆ ೪೩ ರೋಗಿಗಳನ್ನು ಕಳುಹಿಸಲಾಗಿದೆ.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷರಾದ ಪ್ರೇಮ ಗೋಪಾಲ್ ಮಾತನಾಡಿ, ಸಿದ್ದಾಪುರ ಗ್ರಾಮವು ಕೊಡಗಿನ ಗಡಿಯಲ್ಲಿ ಇದ್ದು, ಹೆಚ್ಚು ಮಾನವ ಪ್ರಾಣಿ ಸಂಘರ್ಷಗಳು ಇರುತ್ತದೆ.
ಇಂತಹ ಸಂದರ್ಭದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುವುದು ಮುಖ್ಯವಾಗಿರುತ್ತದೆ ಹಾಗೂ ಕನಿಷ್ಟ ೦೬ ತಿಂಗಳಿಗೆ ಒಮ್ಮೆ ಈ ರೀತಿಯ ಬೃಹತ್ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡು ವುದರಿಂದ ಕೂಲಿ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಬಹಳ ಉಪಯೋಗಕಾರಿಯಾಗಿದೆ ಹಾಗೂ ಹೆಚ್ಚಿನ ಚಿಕಿತ್ಸೆಗಳು ಮಡಿಕೇರಿಯಲ್ಲಿ ಸಿಗುವಂತಾದರೆ ಬಹಳ ಅನುಕೂಲ ಎಂದು ಹೇಳಿದರು.
ಸಿದ್ದಾಪುರ ಗ್ರಾ.ಪಂ. ಸದಸ್ಯರಾದ ದೇವಜನ್ ಮಾತನಾಡಿ, ಸಿದ್ದಾಪುರ ಗ್ರಾಮ ಕಾಡಂಚಿನ ಗ್ರಾಮದಲ್ಲಿ ಒಂದಾಗಿದ್ದು ಇಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಆಯೋಜನೆ ಮಾಡಿರುವ ಆರೋಗ್ಯ ಶಿಬಿರ ತುಂಬಾ ಉಪಯೋಗವಾಗಿದೆ ಎಂದು ಹೇಳಿದರು.
ಸ್ಥಾನೀಯ ವೈದ್ಯಾಧಿಕಾರಿ ಡಾ. ತಿಂಗಳು ೩೦೦೦ ಒಳ ರೋಗಿಗಳು ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಎಲ್ಲಾ ಚಿಕಿತ್ಸೆಗಳನ್ನು ನಮ್ಮ ಸಂಸ್ಥೆಯಲ್ಲಿ ನೀಡಲಾಗುತ್ತಿದೆ. ಹಾಗೆಯೇ ತೃತೀಯ ಹಂತದ ರೋಗಗಳಾದ ಹೃದಯ, ಮೂತ್ರಪಿಂಡ, ಕ್ಯಾನರ್ಗೆ ಸಂಬAಧಿಸಿದAತೆ ಅಗತ್ಯ ವೈದ್ಯಕೀಯ ಸೇವೆಯನ್ನು ಒಳಪಡಿಸಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಇದೆ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಘವೇಂದ್ರ ಮಾತನಾಡಿ, ನಮ್ಮ ಸಂಸ್ಥೆಯ ಸುತ್ತಮುತ್ತ ಹಾಡಿಗಳು ಮತ್ತು ತೋಟದ ಕಾರ್ಮಿಕರು ಹೆಚ್ಚಾಗಿ ಇರುವುದರಿಂದ ಈ ರೀತಿಯ ಆರೋಗ್ಯ ಶಿಬಿರಗಳು ತುಂಬಾ ಪ್ರಯೋಜನಕಾರಿಯಾಗಲಿದೆ ಹಾಗೂ ಈ ಶಿಬಿರದ ಸದುಪಯೋಗವನ್ನು ಸರ್ವರು ಪಡೆದುಕೊಳ್ಳಲು ಕೋರಿದರು.
ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ಗಳ ನೋಂದಣಿ, ಉಚಿತ ಯುಡಿಐಡಿ ನೋಂದಣಿ, ದೇಹದಾನ, ನೇತ್ರದಾನ, ಅಂಗಾAಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ದಿಲೀಪ್ ಹಾಗೂ ದಿನೇಶ್ ಆರೋಗ್ಯ ಮಿತ್ರರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ರಾಮಚಂದ್ರ ಕಾಮತ್, ಸಮುದಾಯ ವೈದ್ಯ ಶಾಸ್ತçದ ಡಾ. ಮಹೇಶ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಪುರುಷೋತ್ತಮ್, ಕಿವಿ, ಮೂಗು, ಗಂಟಲು ವಿಭಾಗದ ಮುಖ್ಯಸ್ಥರಾದ ಡಾ. ಶ್ವೇತಾ, ಕಣ್ಣಿನ ವಿಭಾಗದ ಮುಖ್ಯಸ್ಥರು ಆದ ಡಾ. ಕೃಪಾಲಿನಿ, ಶಸ್ತç ಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಗ್ರೀಷ್ಮ ಹಾಗೂ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಮುದಾಯ ಆರೋಗ್ಯ ಕೇಂದ್ರ ಸಿದ್ದಾಪುರ ವೈದ್ಯರು ಹಾಗೂ ಸಿಬ್ಬಂದಿಗಳು, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮಾಲ್ದಾರೆ, ಸಿದ್ದಾಪುರ, ಚೆಟ್ಟಳ್ಳಿ, ಅಮ್ಮತ್ತಿ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿದ್ದರು.