ಸಿಡಬ್ಲುö್ಯಆರ್‌ಸಿ ನಿರ್ದೇಶನದ ವಿರುದ್ಧ ಮೇಲ್ಮನವಿ

ಬೆಂಗಳೂರು, ಅ. ೧೨: ನೆರೆಯ ತಮಿಳುನಾಡಿಗೆ ನದಿ ನೀರು ಬಿಡುವಂತೆ ರಾಜ್ಯಕ್ಕೆ ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ನಿರ್ದೇಶನದ ವಿರುದ್ಧ ಕರ್ನಾಟಕ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಮಗೆ ೮,೦೦೦-೯,೦೦೦ ಕ್ಯೂಸೆಕ್ (ರಾಜ್ಯದ ಜಲಾಶಯಗಳಲ್ಲಿ) ಒಳಹರಿವು ಇದೆ. ಆದರೆ ಇನ್ನೂ ನಾವು ರೈತರ ಹಿತಾಸಕ್ತಿಗಳನ್ನು ರಕ್ಷಿಸುತ್ತೇವೆ. ಇನ್ನೂ ಮಳೆಯಿಲ್ಲದಿರುವುದರಿಂದ ನಮಗೆ ತುಂಬಾ ಕಷ್ಟವಾಗಿದೆ ಎಂದು ಹೇಳಿದರು.

೫ನೇ ರಾಜ್ಯ ಹಣಕಾಸು ಆಯೋಗ ರಚನೆ

ಬೆಂಗಳೂರು, ಅ. ೧೨: ಕರ್ನಾಟಕ ಸರ್ಕಾರ ೫ನೇ ರಾಜ್ಯ ಹಣಕಾಸು ಆಯೋಗವನ್ನು ರಚಿಸಿದೆ. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಸ್ಥಿತಿಗಳನ್ನು ಪರಿಶೀಲಿಸಿದ ನಂತರ ಸಂಪನ್ಮೂಲಗಳ ಹಂಚಿಕೆ ಹಾಗೂ ವಿಭಜನೆ ಕುರಿತ ಶಿಫಾರಸ್ಸುಗಳನ್ನು ನೀಡಲು ಈ ಆಯೋಗವನ್ನು ರಚಿಸಲಾಗಿದೆ. ಮಾಜಿ ಸಂಸದ ಸಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಈ ಆಯೋಗ ರಚನೆಯಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿ ಮೊಹಮ್ಮದ್ ಸನಾವುಲ್ಲಾ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿಯಂತ್ರಕ ಆರ್.ಎಸ್. ಫೊಂಡೆ ಅವರು ಸಮಿತಿಯ ಸದಸ್ಯರಾಗಿರಲಿದ್ದಾರೆ.

ವಿನಯ್ ಕುಲಕರ್ಣಿ ಬಿ ರಿಪೋರ್ಟ್ ವಜಾ

ಹುಬ್ಬಳ್ಳಿ, ಅ. ೧೨: ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ. ಗುರುನಾಥಗೌಡ ಅವರು ತಮ್ಮ ಸಹೋದರ ಯೋಗೀಶ್‌ಗೌಡನ ಕೊಲೆಗೆ ಸಾಕ್ಷಿ ಎಂದು ಹೇಳಿಕೊಂಡು ಖಾಸಗಿ ದೂರು ದಾಖಲಿಸಿದ್ದು, ಸಾಕ್ಷಿದಾರರಾಗದಂತೆ ಪ್ರಕರಣದ ಆರೋಪಿಗಳಿಂದ ತನಗೆ ಬೆದರಿಕೆ ಇದೆ. ಹತ್ಯೆಯ ತನಿಖೆಯಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ಅಂದಿನ ಸಚಿವ ವಿನಯ್ ಕುಲಕರ್ಣಿ ತಮ್ಮನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ್ದರು ಮತ್ತು ತಮ್ಮ ದೂರಿಗೆ ಸಂಬAಧಿಸಿದ ತನಿಖೆಯಲ್ಲಿ ಪೊಲೀಸರು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ದೂರಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತು ಮತ್ತು ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿಟ್ಟಿತ್ತು. ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಬಳಿಕ ಅವರು, ಸುಪ್ರಿಂಕೋರ್ಟ್ಗೆ ಮೊರೆ ಹೋಗಿದ್ದರು. ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ ೪ ಷರತ್ತು ವಿಧಿಸಿತ್ತು.

ಮಾಲೀಕನಿಗೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆ

ಬೆಂಗಳೂರು, ಅ. ೧೨: ಬ್ಯಾಡರಹಳ್ಳಿ ಗೊಲ್ಲರಹಟ್ಟಿಯಲ್ಲಿರುವ ವಿನಾಯಕ್ ಜ್ಯುವೆಲರ್ಸ್ ಮಳಿಗೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು, ಮಾಲೀಕನ ತೊಡೆಗೆ ಗುಂಡು ಹಾರಿಸಿ ೧ ಕೆ.ಜಿ. ಚಿನ್ನಾಭರಣ ದರೋಡೆ ಮಾಡಿದ್ದಾರೆ. ಗುರುವಾರ ಬೆಳಿಗ್ಗೆ ೧೦.೪೫ರ ಸುಮಾರಿಗೆ ಈ ಘಟನೆ ನಡೆದಿದೆ. ಮಾಲೀಕ ಮನೋಜ್ ಲೋಹ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್ ಅವರು ಗುರುವಾರ ಎಂದಿನAತೆ ಮಳಿಗೆ ತೆರೆದು ವ್ಯಾಪಾರ ಆರಂಭಿಸಿದ್ದರು. ಎರಡು ದ್ವಿಚಕ್ರ ವಾಹನಗಳಲ್ಲಿ ಮಳಿಗೆ ಬಳಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಮಳಿಗೆಯೊಳಗೆ ನುಗ್ಗಿದ್ದರು. ಮಾಲೀಕನಿಗೆ ಪಿಸ್ತೂಲ್ ತೋರಿಸಿ, ಚಿನ್ನಾಭರಣ ನೀಡುವಂತೆ ಹೆದರಿಸಿದ್ದರು. ಆಭರಣ ನೀಡಲು ಮಾಲೀಕ ಒಪ್ಪಿರಲಿಲ್ಲ. ಇದೇ ಸಂದರ್ಭದಲ್ಲಿ ದುಷ್ಕರ್ಮಿಗಳು, ಮಾಲೀಕನ ತೊಡೆಗೆ ಗುಂಡು ಹೊಡೆದಿದ್ದರು. ಮಾಲೀಕ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು, ಮಳಿಗೆಯಲ್ಲಿದ್ದ ಚಿನ್ನಾಭರಣವನ್ನು ಚೀಲದಲ್ಲಿ ತುಂಬಿಕೊAಡು ಪರಾರಿಯಾಗಿದ್ದಾರೆ. ಸ್ಥಳೀಯರೇ ಮನೋಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಅ. ೧೨: ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರಿದರು. ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಯಾವುದೇ ಷರತ್ತು ಇಲ್ಲದೇ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ. ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ ೧೦ ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ ಎಂದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ ೧,೫೦೦ಕ್ಕಿಂತ ಕಡಿಮೆ ಮತಗಳ ಅಂತರದಿAದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ ೪೦ ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳೀಪಟ ಆಗಲಿದೆ ಎಂದರು.

ಮಹಿಷಾ ದಸರಾಗೆ ಷರತ್ತುಬದ್ಧ ಅನುಮತಿ

ಮೈಸೂರು, ಅ. ೧೨: ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ಕೇವಲ ಮೂರು ದಿನಗಳು ಬಾಕಿಯಿರುವಂತೆಯೇ ಮೈಸೂರಿನಲ್ಲಿ ಆಯೋಜಿಸಲಾಗಿರುವ ಮಹಿಷಾ ದಸರಾ ಆಚರಣೆ ಪರ ಹಾಗೂ ವಿರೋಧದ ನಡುವೆ ಷರತ್ತುಬದ್ಧ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಮಹಿಷಾ ದಸರಾ ಸಮಿತಿ ಉದ್ದೇಶಿಸಿತ್ತು. ಇದಕ್ಕೆ ವಿರುದ್ಧವಾಗಿ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಇವರೆಡಕ್ಕೂ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಬದಲಿಗೆ ನಗರದ ಟೌನ್ ಹಾಲ್‌ನಲ್ಲಿ ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡಲಾಗಿದ್ದು ವೇದಿಕೆ ಕಾರ್ಯಕ್ರಮಕ್ಕಷ್ಟೇ ಅನುಮತಿ ನೀಡಲಾಗಿದೆ.

ಅತ್ಯಾಚಾರ ಪ್ರಕರಣದ ಆರೋಪಿಗಳ ಬಿಡುಗಡೆ - ದಾಖಲೆ ಕೇಳಿದ ಸುಪ್ರೀಂ

ನವದೆಹಲಿ, ಅ. ೧೨: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಹಾಗೂ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬAಧಿಸಿದ ಮೂಲ ದಾಖಲೆಗಳನ್ನು ತಾ. ೧೬ ರೊಳಗೆ ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅತ್ಯಾಚಾರ ಪ್ರಕರಣದ ೧೧ ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾ. ಬಿ.ವಿ. ನಾಗರತ್ನ ಹಾಗೂ ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ವಿಭಾಗೀಯ ಪೀಠ, ಆದೇಶವನ್ನು ಕಾಯ್ದಿರಿಸಿದೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಲ್ಕಿಸ್ ಬಾನೊ ಮಾತ್ರವಲ್ಲದೆ, ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ಕೋ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವರು ಪಿಐಎಲ್ ಸಲ್ಲಿಸಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳಿಗೆ ನೀಡಲಾದ ವಿನಾಯಿತಿ ಮತ್ತು ಅವರ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದಾರೆ. ೨೦೦೨ರಲ್ಲಿ ಸಂಭವಿಸಿದ ಗೋದ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುತ್ತಿದ್ದ ಬಿಲ್ಕಿಸ್ ಬಾನೊ ಅವರ ಕುಟುಂಬದ ಮೇಲೆ ದಾಳಿ ನಡೆದಿತ್ತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಜೊತೆಗೆ ಬಾನೊ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು.