ನಾಪೋಕ್ಲು, ಅ. ೧೨: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕ್ರೀಡಾಕೂಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ನಿಲಯದ ಅಥ್ಲೆಟಿಕ್ಸ್ ವಿಭಾಗದ ಬಾಲಕ ಮತ್ತು ಬಾಲಕಿಯರು ಪ್ರಶಸ್ತಿಗಳನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ನಿಲಯದ ವಿದ್ಯಾರ್ಥಿ ಗವೀನ ಎಸ್.ಡಿ. ೬೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ ೪x೧೦೦ ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಚಿರಾಗ್ ಕೆ.ಎಲ್. ೪೦೦ ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಾಜಿ ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ೪x೧೦೦ ಮೀಟರ್ ರಿಲೇನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿ ದರ್ಶನ ೪x೧೦೦ ಮೀಟರ್ ರೀಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಮೇಘನ್ ೪x೧೦೦ ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿದ್ಯಾರ್ಥಿ ನಿಕ್ಷಿತ್ ೮೦ ಮೀಟರ್ ಹಡಲ್ಸ್ ಪ್ರಥಮ ಸ್ಥಾನವನ್ನು ಪೂರ್ವಿಕ ಕೆ.ಸಿ. ೪೦೦ ಮೀಟರ್ ಓಟದಲ್ಲಿ ಪ್ರಥಮ ೬೦೦ ಮೀ.ನಲ್ಲಿ ಪ್ರಥಮ ಸ್ಥಾನಗಳಿದ್ದರೆ ಬಿಸ್ಮಿತ ೪x೧೦೦ ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ ೮೦ ಮೀಟರ್ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಯೋಗೀಶ್ವರಿ ೪x೧೦೦ ಮೀಟರ್ ರಿಲೇಯಲ್ಲಿ ಹಾಗೂ ಭೂಮಿಕ ೪x೧೦೦ ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ ಗಗನ್ ೮೦ ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರಥಮ ಸ್ಥಾನ ಪಡೆದ ಕ್ರೀಡಾ ನಿಲಯದ ವಿದ್ಯಾರ್ಥಿಗಳು ನವೆಂಬರ್ ಮೊದಲ ವಾರದಲ್ಲಿ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಕ್ರೀಡಾ ನಿಲಯದ ಸಹಾಯಕ ನಿರ್ದೇಶಕಿ ವಿಸ್ಮಯ ವಿ.ಟಿ. ಅಭಿನಂದಿಸಿದ್ದು, ಇಲಾಖೆಯ ಅಥ್ಲೆಟಿಕ್ಸ್ ತರಬೇತುದಾರ ಮಹಾಬಲ ತರಬೇತಿ ನೀಡಿದ್ದಾರೆ.