ಮಡಿಕೇರಿ, ಅ. ೧೨: ಮುಂಗಾರು ಸಂದರ್ಭದಲ್ಲಿ ಉಂಟಾಗ ಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್.ಡಿ.ಆರ್.ಎಫ್. ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ನಗರದ ಖಾಸಗಿ ಹೊಟೇಲ್‌ನಲ್ಲಿ ೧೦ನೇ ಬೆಟಾಲಿಯನ್‌ನ ಎನ್.ಡಿ. ಆರ್.ಎಫ್. ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸನ್ಮಾನಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕೊಡಗು ಜಿಲ್ಲೆಯಲ್ಲಿ ೨೦೧೮, ೨೦೧೯, ೨೦೨೦ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಮಡಿಕೇರಿ, ಅ. ೧೨: ಮುಂಗಾರು ಸಂದರ್ಭದಲ್ಲಿ ಉಂಟಾಗ ಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್.ಡಿ.ಆರ್.ಎಫ್. ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ನಗರದ ಖಾಸಗಿ ಹೊಟೇಲ್‌ನಲ್ಲಿ ೧೦ನೇ ಬೆಟಾಲಿಯನ್‌ನ ಎನ್.ಡಿ. ಆರ್.ಎಫ್. ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸನ್ಮಾನಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕೊಡಗು ಜಿಲ್ಲೆಯಲ್ಲಿ ೨೦೧೮, ೨೦೧೯, ೨೦೨೦ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಏರ್ಪಡಿಸಿ ಜಿಲ್ಲೆಯ ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಿತ್ತು ಎಂದು ಹೇಳಿದರು. ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದ ಎನ್‌ಡಿಆರ್‌ಎಫ್ ತಂಡ ಹಲವು ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿ.ಪಂ. ಸಿಇಓ ವರ್ಣಿತ್ ನೇಗಿ ಮಾತನಾಡಿ, ಅತಿವೃಷ್ಟಿ, ಅನಾವೃಷ್ಟಿ ಎದುರಿಸುವಲ್ಲಿ ಪ್ರತೀ ಹಂತದಲ್ಲಿಯೂ ಸಿದ್ಧತೆ ಅತ್ಯಗತ್ಯ. ಆ ನಿಟ್ಟಿನಲ್ಲಿ ಎನ್‌ಡಿಆರ್‌ಎಫ್ ತಂಡ ತಮ್ಮದೇ ಕಾರ್ಯ ಚಟುವಟಿಕೆಯನ್ನು ಕೈಗೊಂಡು ಜಿಲ್ಲೆಯ ಜನತೆಯಲ್ಲಿ ವಿಶ್ವಾಸ ಉಂಟುಮಾಡಿದೆ ಎಂದು ಹೇಳಿದರು.
ಎನ್‌ಡಿಆರ್‌ಎಫ್ ತಂಡದ ೧೦ನೇ ಬೆಟಾಲಿಯನ್ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಮಾತನಾಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಜೂನ್ ತಿಂಗಳಿನಿAದ ಇಲ್ಲಿಯವರೆಗೆ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಣಕು ಪ್ರದರ್ಶನ, ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಗಳು, ೨೦ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ, ಮೆಡಿಕಲ್ ಕಿಟ್ ವಿತರಣೆ, ವಿವಿಧ ಕಡೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ, ಗಾಂಧಿ ಜಯಂತಿ ಪ್ರಯುಕ್ತ ನಗರಸಭೆಯೊಂದಿಗೆ ಶ್ರಮದಾನ ಕಾರ್ಯಕ್ರಮ, ಹೀಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಲಾಗಿತ್ತು ಎಂದು ವಿವರಿಸಿದರು.
ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಮಾತನಾಡಿ, ಎನ್‌ಡಿಆರ್‌ಎಫ್ ತಂಡದ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎನ್‌ಡಿಆರ್‌ಎಫ್ ತಂಡದ ಜಿ.ಎಲ್. ಆಕರ್ಷ್ ಮಾತನಾಡಿ, ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ ಎದುರಿಸುವುದು ಅತ್ಯಗತ್ಯವಾಗಿದೆ ಎಂದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್, ಡಿವೈಎಸ್‌ಪಿ ಜಗದೀಶ್, ಅನೂಪ್ ಮಾದಪ್ಪ, ಶಿರಸ್ತೇದಾರ್ ಪ್ರಕಾಶ್, ಎನ್‌ಡಿಆರ್‌ಎಫ್ ತಂಡದ ಪ್ರತಿನಿಧಿಗಳು ಇತರರು ಇದ್ದರು.