ಮಡಿಕೇರಿ, ಅ. ೧೨: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಶಕ್ತಿ ದಿನಪತ್ರಿಕೆ ಸ್ಥಾಪಕ ಸಂಪಾದಕರು ಹಾಗೂ ಸಾಹಿತಿ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಹಾಗೂ ಜಿಲ್ಲಾ ಮಟ್ಟದ ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ತಾ. ೧೪ ರಂದು ನಡೆಯಲಿದೆ.
ನವೋದಯ ಶಾಲೆಯಲ್ಲಿ ಅಂದು ಮಧ್ಯಾಹ್ನ ೨.೩೦ಕ್ಕೆ ಕ.ಸಾ.ಪ. ಅಧ್ಯಕ್ಷ ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ನವೋದಯ ಶಾಲೆ ಪ್ರಾಂಶುಪಾಲ ಓ.ಎಂ. ಪಂಕಜಾಕ್ಷನ್ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ನಾಗೇಶ್ ಕಾಲೂರು ಗೋಪಾಲಕೃಷ್ಣ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ. ದತ್ತಿ ದಾನಿ, ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ. ಅನಂತಶಯನ ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ಮಾರುತಿ ದಾಸಣ್ಣನವರ್, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.