ಮಡಿಕೇರಿ, ಅ. ೧೩ : ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಲ್ಲಿ ನನಗೆ ದತ್ತವಾಗಿರುವ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಾ. ೧೭ರಂದು ಬೆಳಿಗ್ಗೆ ೬ ಗಂಟೆಯಿAದ ತಾ. ೧೮ರ ಮಧ್ಯರಾತ್ರಿ ೧೨ ಗಂಟೆಯವರೆಗೆ ತಲಕಾವೇರಿ, ಭಾಗಮಂಡಲ,ಚೇರAಬಾಣೆ ಮತ್ತು ಸದರಿ ಗ್ರಾಮಗಳ ಸುತ್ತಮುತ್ತ ೫ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿರುತ್ತೇನೆ.