ಮಡಿಕೇರಿ, ಅ. ೧೩ : ಐತಿಹಾಸಿಕ ನಾಡ ಹಬ್ಬ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಬಹುಭಾಷಾ ಕವಿಗೋಷ್ಠಿಯನ್ನು ಈ ಬಾರಿ ಅರ್ಥ ಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಸಮಿತಿಯ ಅಧ್ಯಕ್ಷ ಉಜ್ವಲ್ ರಂಜಿತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಾ. ೧೮ ರಂದು ಬೆಳಿಗ್ಗೆ ೯ ಗಂಟೆಗೆ ಗಾಂಧಿ ಮೈದಾನ ರಸ್ತೆಯಲ್ಲಿರುವ ರಾಷ್ಟçಕವಿ ಕುವೆಂಪು ಅವರ ಪ್ರತಿಮೆಗೆ ಹಿರಿಯ ಕವಿ ಸಾಹಿತಿ ಸಂಶೋಧಕರಾದ ಡಾ. ಕೋರನ ಸರಸ್ವತಿ ಪ್ರಕಾಶ್ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಬಳಿಕ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕವಿಗೋಷ್ಠಿಯನ್ನು ಹೈಕೋರ್ಟ್ನ ಹಿರಿಯ ವಕೀಲರು ಹಾಗೂ ಅಂಕಣಕಾರರಾದ ಹೆಚ್.ಎಸ್. ಚಂದ್ರಮೌಳಿ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕವಿಗೋಷ್ಠಿ ಸಮಿತಿ
(ಮೊದಲ ಪುಟದಿಂದ) ಅಧ್ಯಕ್ಷ ಉಜ್ವಲ್ ರಂಜಿತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಂತಾರ ಚಲನಚಿತ್ರ ಖ್ಯಾತಿಯ ಯುವ ಸಾಹಿತಿ, ಕಾಂತಾರ ಚಿತ್ರದ ಸಿಂಗಾರ ಸಿರಿಯೆ ಹಾಡಿನ ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ ವಿಜೇತರಾದ ಪ್ರಮೋದ್ ಮರವಂತೆ ಆಗಮಿಸಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಕೋರನ ಸರಸ್ವತಿ ಪ್ರಕಾಶ್ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಅತಿಥಿಗಳಾಗಿ ಉದ್ಯಮಿ ಹಾಗೂ ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ಗಿರೀಶ್ ಮಲ್ಲಪ್ಪ ಮೋರಿಕಲ್ಲು, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ. ಮೇಚಿರ ಸುಭಾಶ್ ನಾಣಯ್ಯ, ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ. ಅಂದು ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕವಿಗಳಿಗೆ ಪ್ರಶಂಸನಾ ಪತ್ರ ವಿತರಣೆ ಮಾಡಲಿದ್ದಾರೆ ಎಂದು ಉಜ್ವಲ್ ರಂಜಿತ್ ವಿವರಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎಂ. ರವಿ ಮಾತನಾಡಿ, ಈ ಬಾರಿ ೨೦೦ ಕ್ಕೂ ಹೆಚ್ಚು ಕವನಗಳು ಬಂದಿದ್ದು ಅವುಗಳಲ್ಲಿ ಸುಮಾರು ೬೦ ಕವನಗಳನ್ನು ಆಯ್ಕೆ ಮಾಡಿ ಕವನ ಸಂಕಲನ ಹೊರತರ ಲಾಗುತ್ತಿದೆ. ಕವಿಗೋಷ್ಠಿಯನ್ನು ವಿಭಿನ್ನವಾಗಿ ಆಚರಿಸುವ ನಿಟ್ಟಿನಲ್ಲಿ ತಯಾರಿ ನಡೆದಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಸಹಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ, ಸದಸ್ಯರಾದ ಎಸ್.ಜಿ. ಉಮೇಶ್, ಕೌಸರ್, ಅರುಣ್ ಕೂರ್ಗ್ ಉಪಸ್ಥಿತರಿದ್ದರು.