*ಗೋಣಿಕೊಪ್ಪ, ಅ. ೧೪: ಕೆ.ಪಿ.ಎಸ್ ಪೊನ್ನಂಪೇಟೆ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಅಯ್ಯಪ್ಪ ಪಿ.ಸಿ. ಅಮೂಲ್ಯ ಈ ಇಬ್ಬರು ವಿದ್ಯಾರ್ಥಿಗಳು ೧೦೦ ಮತ್ತು ೨೦೦ ಮೀಟರ್ ಓಟದಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
೧೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ೨೦೦ ಮೀಟರ್ ಓಟದಲ್ಲಿ ದ್ವಿತಿಯ ಸ್ಥಾನ, ಅಮೂಲ್ಯ ೧೦೦ ಮೀಟರ್ನಲ್ಲಿ, ೨೦೦ ಮೀಟರ್ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲೆಯ ಅಜ್ಜರಕಾಡು ಎಂಬಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯ ಶಿಕ್ಷಕ ವಿಜಯ್ ತಿಳಿಸಿದ್ದಾರೆ.