ಮಡಿಕೇರಿ, ಅ. ೧೪: ನಗರದ ೪ ಶಕ್ತಿದೇವತೆಗಳ ಕರಗೋತ್ಸವದ ಮೂಲಕ ತಾ. ೧೫ ರಂದು (ಇಂದು) ಮಡಿಕೇರಿ ದಸರಾಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಲಿದೆ.
ಸಂಜೆ ೫ ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನು ಸಲ್ಲಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳುವ ಮೂಲಕ ಮಡಿಕೇರಿ ದಸರಾಗೆ ಚಾಲನೆ ದೊರೆಯಲಿದೆ ಎಂದು ನಗರ ದಸರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದೂರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಬಳಿಕ ನಗರ ಪ್ರದಕ್ಷಿಣೆ ನಡೆಯಲಿದೆ. ಈ ಸಂಬAಧ ಪಂಪಿನಕೆರೆಯಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.