ಮಡಿಕೇರಿ, ಅ. ೧೪: ದಸರಾ ಉತ್ಸವ ಹಿನ್ನೆಲೆ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು. ಶಸ್ತç ಸಜ್ಜಿತ ಪೊಲೀಸರು ನಗರದ ಮುಖ್ಯ ಬೀದಿಯಲ್ಲಿ ಸಾಗಿದರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಡಿ.ವೈ.ಎಸ್ಪಿ. ಜಗದೀಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.