ಕೂಡಿಗೆ, ಅ. ೧೪: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಂಜರಾಯಪಟ್ಟಣ ಸರಕಾರಿ ಹಿರಿಯ ಪ್ರಾಥಮಿಕ, ಶಾಲೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ರೂ. ೫ ಲಕ್ಷದ ೨೦ ಸಾವಿರ ವೆಚ್ಚದ ಹೈಟೆಕ್ ಶೌಚಾಲಯದ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ನೆರವೇರಿಸಿದರು.

ಈ ಸಂದರ್ಭ ಉಪಾಧ್ಯಕ್ಷೆ ಪಿ.ಎನ್. ಕುಸುಮ, ಸದಸ್ಯರಾದ ಸಮೀರ, ಮಾವಜಿ ರಕ್ಷಿತ್, ಆರ್.ಕೆ. ಚಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್, ಕಾರ್ಯದರ್ಶಿ ಶೇಷಗಿರಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯ, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.