ಚೆಯ್ಯAಡಾಣೆ, ಅ. ೧೬: ನಾಪೋಕ್ಲು ವ್ಯಾಪ್ತಿಯಲ್ಲಿ ಮುಂಬರುವ ದಿನಗಳಲ್ಲಿ ಅಹಿತಕರ ಘಟನೆಗಳು ಸಂಭವಿಸದAತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಪೋಕ್ಲುವಿನಲ್ಲಿ ಪಥಸಂಚಲನ ನಡೆಯಿತು.

ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸುವ ಮೂಲಕ ನಾಗರಿಕರಿಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.