ಸೋಮವಾರಪೇಟೆ, ಅ.೧೫ : ಒಕ್ಕಲಿಗರ ಬಗ್ಗೆ ಸಾಹಿತಿ ಭಗವಾನ್ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ತಕ್ಷಣ ಸಮುದಾಯದ ಕ್ಷಮೆ ಕೇಳಬೇಕು. ಇಂತಹ ಅಸಂಬದ್ಧ ಹೇಳಿಕೆಗಳು ಮುಂದುವರೆದರೆ ಒಕ್ಕಲಿಗರ ಯುವ ವೇದಿಕೆ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಮೋರಿಕಲ್ಲು ಎಚ್ಚರಿಸಿದ್ದಾರೆ. ಒಕ್ಕಲಿಗರು ಹೊಲ ಗದ್ದೆಗಳಲ್ಲಿ ಕೃಷಿ ಮಾಡಿಕೊಂಡು ದೇಶಕ್ಕೆ ಅನ್ನ ನೀಡುತ್ತಿದ್ದಾರೆ. ಸಾಂಸ್ಕೃತಿಕ, ಸಾಮಾಜಿಕವಾಗಿಯೂ ಮೌಲ್ಯಯುತ ಜೀವನ ನಡೆಸುತ್ತಿದ್ದಾರೆ. ನಾಡಿಗೆ ಅನ್ನ ನೀಡುತ್ತಿರುವ ಸಮುದಾಯದ ಬಗ್ಗೆ ಅವಹೇಳನಕಾರಿಯಂತಹ ಹೇಳಿಕೆಗಳನ್ನು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.