ಮಡಿಕೇರಿ, ಅ.೧೫ : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬAಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು. ನಂತರ ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸುಬ್ರಹ್ಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾಂಸ್ಕೃತಿಕ ಗೀತಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾದಿಗಳ ಅನುಕೂಲಕ್ಕಾಗಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ವ್ಯವಸ್ಥೆಗಳು ಮತ್ತಿತರ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ನಾಡಿನ ಜೀವನದಿ, ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬAಧಿಸಿದAತೆ ಸಿದ್ಧತೆ ಬಗ್ಗೆ ಹಲವು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಸಚಿವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬAಧ ಒಂದು ತಿಂಗಳಿನಿAದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿAದ ತಲಕಾವೇರಿ ಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಿಂದಿನAತೆ ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡ ಲದಿಂದ ತಲಕಾವೇರಿವರೆಗೆ ವಿದ್ಯುತ್ ದೀಪ, ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಭಕ್ತಾದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈದ್ಯರು ಮತ್ತು ಶುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಗಮನಹರಿಸ ಲಾಗುವುದು ಎಂದು ಸಚಿವರು ಹೇಳಿದರು. ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್‌ನ್ನು ಬಳಸಬಾರದು. ಸ್ವಪ್ರೇರಣೆಯಿಂದ ಭಕ್ತಾದಿಗಳೇ ಪ್ಲಾಸ್ಟಿಕ್‌ನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕೋರಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿ ಕಾರಿ ಸುಂದರರಾಜ್ ಅವರು ಮಾಹಿತಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ೨ ಡಿವೈಎಸ್‌ಪಿ, ೯ ಪೊಲೀಸ್ ಇನ್ಸ್ಪೆ ಕ್ಟರ್, ೧೫ ಸಬ್ ಇನ್ಸ್ಪೆಕ್ಟರ್‌ಗಳು, ೩೦ ಮಂದಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಗಳು, ೩೫೦ ಹೆಡ್‌ಕಾನ್ಸಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳ ದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋಬಸ್ತ್ ಮಾಡಿಕೊಳ್ಳ ಲಾಗಿದೆ ಎಂದು ವಿವರಿಸಿದರು.

ಭಾಗಮಂಡಲದಿAದ-ತಲ ಕಾವೇರಿ, ತಲಕಾವೇರಿಯಿಂದ ಭಾಗ ಮಂಡಲಕ್ಕೆ ೨೦ ಬಸ್‌ಗಳು ಸಂಚರಿಸ ಲಿವೆ. ಹಾಗೆಯೇ ಜನದಟ್ಟಣೆ ನೋಡಿ ಕೊಂಡು ಮಡಿಕೇರಿ-ಭಾಗಮಂಡಲ, ಭಾಗಮಂಡಲದಿAದ-ಮಡಿಕೇರಿ ಮಾರ್ಗ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರಾದ ಮೆಹಬೂಬ ಆಲಿ ಅವರು ಮಾಹಿತಿ ನೀಡಿದರು. ಮಡಿಕೇರಿ-ಭಾಗಮಂಡಲ, ತಲ ಕಾವೇರಿಗೆ ತೆರಳುವ ರಸ್ತೆಗಳ ಗುಂಡಿಮುಚ್ಚುವ ಕಾರ್ಯ ಪೂರ್ಣ ಗೊಳ್ಳುತ್ತಿದೆ ಎಂದು ಲೋಕೋಪ ಯೋಗಿ ಇಲಾಖೆ ಇಂಜಿನಿಯರ್ ಸಿದ್ದೇಗೌಡ ಅವರು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಭಾಗಮಂಡಲ-ಭಗAಡೇಶ್ವರ ದೇವಾಲಯದ ಕಾರ್ಯನಿರ್ವ ಹಣಾಧಿಕಾರಿ ಚಂದ್ರಶೇಖರ್, ಪೊನ್ನಣ್ಣ, ಭಾಗಮಂಡಲ ತಲಕಾವೇರಿ ದೇವಾಲ ಯಗಳ ಪ್ರಮುಖರಾದ ಬಿ.ಎಸ್. ತಮ್ಮಯ್ಯ, ದೇವಾಲಯದ ತಕ್ಕ ಮುಖ್ಯ ಸ್ಥರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ ಇತರರು ಇದ್ದರು.