ಮುಳ್ಳೂರು, ಅ. ೧೫: ವಿದ್ಯಾರ್ಥಿ ಗಳು ಮೊಬೈಲ್, ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಪಠ್ಯ ಬೋಧನೆ ಕಡೆ ಗಮನ ಹರಿಸಿದರೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬಹುದು ಎಂದು ಸೋಮವಾರಪೇಟೆ ಸಂತ ಜೋಸೆಪ್ ಪ.ಪೂ.ಕಾಲೇಜಿನ ಉಪನ್ಯಾಸಕಿ ಚೈತ್ರ ಅಭಿಪ್ರಾಯ ಪಟ್ಟರು.
ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ, ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ೨೦೨೩ನೇ ಸಾಲಿನ ವಿದ್ಯಾರ್ಥಿಗಳಿಗೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾಗತ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾದರಿ ಯಾಗಿರಬೇಕು ಅದೇ ರೀತಿ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿ ಗಳಲ್ಲಿರುವ ಮಾದರಿ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮುವಂತೆ ಸಲಹೆ ನೀಡಿದರು,
ಕಾಲೇಜು ಪ್ರಾಂಶುಪಾಲ ಇ.ಎಂ.ದಯಾನAದ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ಈ ಹಿಂದೆ ಸದರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಬೇರೆ ಕಾಲೇಜಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕ ಚಂದ್ರಶೇಖರ್ಮೂರ್ತಿ ಅವರನ್ನು ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿ ಸಲಾಯಿತು. ಸಮಾರಂಭದಲ್ಲಿ ಹಿರಿಯ ಉಪನ್ಯಾಸಕರಾದ ಮೋಹನ್, ಸುರೇಂದ್ರ, ಎಂ.ಎನ್. ಹರೀಶ್, ಎಚ್.ಎಂ.ವಿವೇಕ್ ಉಪ ನ್ಯಾಸಕರ ವರ್ಗದವರು ಹಾಜ ರಿದ್ದರು.