ವೀರಾಜಪೇಟೆ, ಅ. ೧೬: ಹಿರಿಯ ನಾಗರಿಕರನ್ನು ಸಮಾಜದಲ್ಲಿ ಮತ್ತು ಮನೆಯಲ್ಲಿ ಪ್ರೀತಿಯಿಂದ ಗೌರವದಿಂದ ಕಾಣಬೇಕೆಂದು ವೀರಾಜಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಮಂಜುನಾಥ್ ಹೇಳಿದರು.

ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟಿçÃಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕರ ದಿನ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಹಿರಿಯರನ್ನು ಗೌರವದಿಂದ ಕಾಣುವಂತಾಗಬೇಕು. ಎಲ್ಲಾ ವೃತ್ತಿಯಲ್ಲಿರುವವರು, ಅವರ ವೃತ್ತಿಗೆ ನ್ಯಾಯ ಕೊಡಬೇಕು. ಆಗ ಸಮಾಜದಲ್ಲಿ ಎಲ್ಲರಿಗೂ ನ್ಯಾಯ ಸಿಗುವಂತೆ ಆಗುತ್ತದೆ ಎಂದು ಅವರು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ಎಂದು ತಿಳಿ ಹೇಳಿದರು. ವೀರಾಜಪೇಟೆಯ ತಾಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ ಕೊಟಾರಿ, ಅಪರ ಸಿವಿಲ್ ನ್ಯಾಯಾಧೀಶ ಪ್ರದೀಪ ಪೋತದಾರ್, ರಾಷ್ಟಿçÃಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಹೆಚ್.ಎನ್. ವೇಣುಗೋಪಾಲ್, ಬೋಧಕ-ಬೋಧಕೇತರ ವೃಂದದವರು ಮತ್ತು ಸ್ವಯಂ ಸೇವಕ-ಸೇವಕಿಯರು ಹಾಜರಿದ್ದರು.