ಕೂಡಿಗೆ, ಅ. ೧೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಪುನರ್ವಸತಿ ಶಿಬಿರದಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು.
ಗ್ರಾ. ಪಂ. ವತಿಯಿಂದ ಶಿಬಿರವನ್ನು ನಿರ್ಲಕ್ಷಿಸಲಾಗಿದ್ದು ಯಾವುದೇ ರೀತಿಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬುದು ಶಿಬಿರದ ನಿವಾಸಿಗಳ ಆರೋಪವಾಗಿತ್ತು. ಈ ಹಿನ್ನಲೆಯಲ್ಲಿ ಗ್ರಾ.ಪಂ. ಮುಂದೆ ಪ್ರತಿಭಟನೆ ನಡೆಸಲು ಕೂಡ ಸಜ್ಜಾಗಿದ್ದರು. ಗ್ರಾಮಸ್ಥರ ಮನವಿಯ ಮೇರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಅವರು ಖುದ್ದು ಶಿಬಿರಕ್ಕೆ ಭೇಟಿ ನೀಡಿ ಪರಿಶೀಲಿಸಿ ಜೆ.ಸಿ.ಬಿ. ಯಂತ್ರದ ಮೂಲಕ ಕಾಡು ಗಿಡಗಳನ್ನು ತೆರವುಗೊಳಿಸಿ, ಚರಂಡಿ ಸ್ವಚ್ಛತಾ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.