ನಾಪೋಕ್ಲು, ಅ. ೧೬: ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ೨೭ನೇ ವರ್ಷದ ಕಾವೇರಿ ರಥಯಾತ್ರೆ ತಾ. ೧೭ರಿಂದ ೧೮ರ ವರೆಗೆ ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದರು.

ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ನಾಪೋಕ್ಲುವಿನ ರಾಮಮಂದಿರದಿAದ ೧೨ ಗಂಟೆಗೆ ಹೊರಡಲಿದ್ದು ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚೇರಂಬಾಣೆ -ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲ-ತಲಕಾವೇರಿಗೆ ತೆರಳಲಿದೆ. ತಲಕಾವೇರಿಗೆ ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದರು.

ತಾ. ೧೮ ರಂದು ಬೆಳಿಗ್ಗೆ ಆರು ಗಂಟೆಗೆ ಭಾಗಮಂಡಲದಿAದ ರಥಯಾತ್ರೆ ಆರಂಭಗೊಳ್ಳಲಿದ್ದು ಚೇರಂಗಾಲ, ಬೆಳಿಗ್ಗೆ ೭ ಗಂಟೆಗೆ ಅಯ್ಯಂಗೇರಿ, ಪುಲಿಕೋಟು ೯ ಗಂಟೆಗೆ ಪೇರೂರು ಬಲ್ಲಮಾವಟಿ, ೧೧ ಗಂಟೆಗೆ ಚೋನಕೆರೆ ಮೂಲಕ ಮಧ್ಯಾಹ್ನ ೧೨.೩೦ ಗಂಟೆಗೆ ನಾಪೋಕ್ಲು ತಲುಪಲಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಲಿಯಾಟಂಡ ಮಯ್ಯು ದೇವಯ್ಯ, ಪದಾಧಿಕಾರಿಗಳಾದ ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕಲಿಯಾಟಂಡ ಸುಮಿ ದೇವಯ್ಯ, ಮಚ್ಚಂಡ ಶಂಭು ಇದ್ದರು.