ಗೋಣಿಕೊಪ್ಪಲು, ಅ. ೧೬: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕಮಿಷನ್ ದಂಧೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಮಂಡೇಪAಡ ಸುಜಾಕುಶಾಲಪ್ಪ ಗಂಭೀರ ಆರೋಪ ಮಾಡಿದರು. ಗೋಣಿಕೊಪ್ಪಲುವಿನ ಬಸ್ ನಿಲ್ದಾಣದಲ್ಲಿ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಮುಂದಾಳತ್ವದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಇವರು, ಭ್ರಷ್ಟಾಚಾರ ಮುಕ್ತ ಮಾಡುವುದಾಗಿ ಚುನಾವಣಾ ಸಂದರ್ಭದಲ್ಲಿ
(ಮೊದಲ ಪುಟದಿಂದ) ಮಾತು ಕೊಟ್ಟ ಕಾಂಗ್ರೆಸ್ ಸರ್ಕಾರ ಇದೀಗ ಶೇ.೫೦ ಕಮೀಷನ್ ದಂಧೆಯಲ್ಲಿ ತೊಡಗಿಸಿಕೊಂಡಿದೆ ಎಂದು ದೂರಿದರು.
ಬೆಂಗಳೂರಿನ ಬಿಬಿಎಂಪಿಯಲ್ಲಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ದಂಧೆ ನಡೆದಿದೆ. ಐಟಿ ರೇಡ್ ಮೂಲಕ ಕೋಟ್ಯಂತರ ರೂಪಾಯಿ ಹಣವು ಅಧಿಕಾರಿಗಳಿಗೆ ಲಭಿಸಿದೆ. ಈ ಹಣವನ್ನು ಚುನಾವಣೆ ನಡೆಯುವ ರಾಜ್ಯಗಳಿಗೆ ಕಳುಹಿಸುವ ಹುನ್ನಾರ ಕಾಂಗ್ರೆಸ್ ಸರ್ಕಾರ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು. ಅಧಿಕಾರಿಗಳ ದಬ್ಬಾಳಿಕೆಗಳು ತಾಂಡವವಾಡುತ್ತಿವೆ. ಭ್ರಷ್ಟರಿಗೆ ಸರ್ಕಾರ ಮಣೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ, ರಾಜ್ಯದಲ್ಲಿ ಜನತೆಗೆ ನೆಮ್ಮದಿಯ ವಾತಾವರಣ ಮರೀಚಿಕೆಯಾಗಿದೆ. ಒಂದು ಸಮುದಾಯವನ್ನು ಓಲೈಸುವುದರಲ್ಲಿ ಸರ್ಕಾರ ನಿರತವಾಗಿದೆ. ಇಂತಹ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು. ಮುಂದೊAದು ದಿನ ಕರ್ನಾಟಕ ರಾಜ್ಯ ಉಳಿಯುವುದೇ ಕಷ್ಟವಾದರೂ ಅಚ್ಚರಿ ಪಡಬೇಕಿಲ್ಲ ಎಂದು ಟೀಕಿಸಿದರು. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ. ಸರ್ಕಾರದ ಹಗರಣಗಳು ಸದ್ಯದಲ್ಲಿಯೇ ಹೊರಬೀಳಲಿದೆ ಎಂದು ಕಿಡಿಕಾರಿದರು.
ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ರೈತ ವಿರೋಧಿ ನೀತಿಗಳು ತುಷ್ಠಿಕರಣ ಪರಮಾವಧಿಗೆ ತಲುಪಿದೆ. ಈ ಹಿಂದೆ ಬಿಜೆಪಿ ವಿರುದ್ಧ ೪೦ ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸ್ ಇಂದು ತಾನು ೫೦ ಪರ್ಸೆಂಟ್ ಕಮೀಷನ್ ಸರ್ಕಾರವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿಯ ಗುಮ್ಮಟ್ಟಿರ ಕಿಲನ್ ಗಣಪತಿ, ಕುಂಞAಗಡ ಅರುಣ್ ಭೀಮಯ್ಯ, ಪಟ್ರಪಂಡ ರಘು, ಮೂಕೊಂಡ ಶಶಿ ಸುಬ್ರಮಣಿ, ವೀರಾಜಪೇಟೆ ಮಂಡಲ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ವಾಟೇರಿರ ಬೋಪಣ್ಣ ಸೇರಿದಂತೆ ಪಕ್ಷದ ಮುಖಂಡರುಗಳಾದ ಕುಟ್ಟಂಡ ಅಜಿತ್ ಕರುಂಬಯ್ಯ, ಅಪ್ಪಂಡೇರAಡ ಭವ್ಯ, ರಾಣಿ ನಾರಾಯಣ, ಮಲ್ಚೀರ ಕವಿತ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು. ನಗರದಲ್ಲಿ ಕೆಲ ಕಾಲ ರಸ್ತೆತಡೆ ಹಾಗೂ ಮಾನವ ಸರಪಳಿ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ವಾಹನ ಸವಾರರಿಗೆ ಅಡಚಣೆಯಾಗಿತ್ತು. ಬದಲಿ ಮಾರ್ಗದಲ್ಲಿ ಪೊಲೀಸರು ವಾಹನವನ್ನು ಚಲಾಯಿಸಲು ಅವಕಾಶ ಕಲ್ಪಿಸಿದರು. ಬಿಜೆಪಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.