ಮಡಿಕೇರಿ, ಅ. ೧೭: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕ ಡಾ. ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರು ಮಂಗಳವಾರ ‘ಕೊಡವ ಹೆರಿಟೇಜ್’ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈಗಾಗಲೇ ೩ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬAಧಪಟ್ಟ ಎಂಜಿನಿಯರ್ಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಕೆಲವು ಯೋಜನೆಗಳಿಗೆ ಹಣ ಇದ್ದರೂ ಸಹ ಪೂರ್ಣಗೊಳಿಸುತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿ.ಪಂ. ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಇತರರು ಇದ್ದರು.