ಮಡಿಕೇರಿ, ಅ. ೧೭: ಮಾದಾಪುರದ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ೨೦೨೩-೨೦೨೪ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಪೊನ್ನಪ್ಪ ನೆರವೇರಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಹರ್ಷ ಮಾತನಾಡಿ, ಎನ್‌ಎಸ್‌ಎಸ್‌ನಿಂದ ಸ್ವಯಂ ಶಿಸ್ತು, ಸಮಯ ಪ್ರಜ್ಞೆ, ಸಮಾಜ ಸೇವೆ, ರಾಷ್ಟಿçÃಯ ಭಾವೈಕ್ಯತೆ ರೂಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಕಾರ್ಯಕ್ರಮಾಧಿಕಾರಿ ಎನ್.ಎನ್. ಮನೋಹರ್, ಸಂಸ್ಥೆಯ ಬೋಧಕ-ಬೋಧಕೇತರ ವರ್ಗ, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.