ವಿಶೇಷ ವಿವಾಹ ಕಾಯಿದೆ ಜಾರಿ ಸಂಸತ್ತಿಗೆ ಬಿಟ್ಟದು-ಸುಪ್ರೀಂ

ನವದೆಹಲಿ, ಅ. ೧೭: ವಿಶೇಷ ವಿವಾಹ ಕಾಯಿದೆಗೆ ಸಂಬAಧಪಟ್ಟAತೆ ಕಾನೂನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವ್ಯಾಖ್ಯಾನಿಸಬಹುದು, ಆದರೆ ಅದನ್ನು ಬದಲಾಯಿಸುವುದು ಸಂಸತ್ತು ಅಂದರೆ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ. ಅವರು ಇಂದು ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ೨೧ ಮನವಿಗಳ ವಿಚಾರಣೆ ಕೈಗೆತ್ತಿಕೊಂಡು ತೀರ್ಪು ನೀಡುವ ಸಂದರ್ಭದಲ್ಲಿ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್ ಮತ್ತು ಪಿ.ಎಸ್. ನರಸಿಂಹ ಮತ್ತು ಹಿಮಾ ಕೊಹ್ಲಿ ನೇತೃತ್ವದ ಪಂಚಸದಸ್ಯ ಪೀಠ ಸಲಿಂಗ ವಿವಾಹ ಕುರಿತು ಮಹತ್ವದ ತೀರ್ಪು ನೀಡಿದ್ದಾರೆ. ಸಮಾಜದಲ್ಲಿ ಎಲ್‌ಜಿಬಿಟಿ ಸಮುದಾಯ ವಿರುದ್ಧ ತಾರತಮ್ಯ ಮಾಡದಂತೆ ನೋಡಿಕೊಳ್ಳಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ ಮುಖ್ಯ ನ್ಯಾಯಮೂರ್ತಿಗಳು, ಸಲಿಂಗ, ದ್ವಿಲಿಂಗಿಗಳು, ತೃತೀಯ ಲಿಂಗಗಳು ಒಂದು ಸಹಜ ವಿದ್ಯಮಾನವಾಗಿದ್ದು ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದು ನಗರ ಪ್ರದೇಶಗಳಲ್ಲಿ ಮತ್ತು ಶ್ರೀಮಂತ ಹಾಗೂ ಗಣ್ಯ ವ್ಯಕ್ತಿಗಳಲ್ಲಿ ಮಾತ್ರ ಕಂಡುಬರುವ ವಿದ್ಯಮಾನವಲ್ಲ ಎಂದರು. ಜಸ್ಟಿಸ್ ಕೌಲ್ ಅವರು ಸಲಿಂಗ ದಂಪತಿಗಳಿಗೆ ಕೆಲವು ಹಕ್ಕುಗಳನ್ನು ನೀಡುವ ಬಗ್ಗೆ ಸಿಜೆಐ ಅವರ ಮಾತುಗಳಿಗೆ ದನಿಗೂಡಿಸಿದರು. "ವಿಭಿನ್ನ ಲಿಂಗೇತರ ಮತ್ತು ಭಿನ್ನಲಿಂಗೀಯ ಒಕ್ಕೂಟಗಳನ್ನು ಒಂದೇ ನಾಣ್ಯದ ಎರಡು ಮುಖಗಳಾಗಿ ನೋಡಬೇಕು" ಎಂದು ಅವರು ಹೇಳಿದರು, ಸಲಿಂಗಿಗಳ ಒಕ್ಕೂಟಗಳಿಗೆ ಕಾನೂನು ಮಾನ್ಯತೆ ವಿವಾಹ ಸಮಾನತೆಯತ್ತ ಹೆಜ್ಜೆಯಾಗಿದೆ ಎಂದರು. ತಮ್ಮ ತೀರ್ಪಿನ ಆಪರೇಟಿವ್ ಭಾಗವನ್ನು ಓದಿದ ನ್ಯಾಯಮೂರ್ತಿ ಭಟ್, ಕೆಲವು ಅಂಶಗಳಲ್ಲಿ ಸಿಜೆಐ ಅವರ ಅಭಿಪ್ರಾಯಗಳನ್ನು ಒಪ್ಪಿದರೆ ಇನ್ನು ಕೆಲವು ವಿಷಯಗಳನ್ನು ಒಪ್ಪಲಿಲ್ಲ. ನಿರ್ಣಾಯಕ ವಿಷಯದ ಕುರಿತು ತೀರ್ಪು ನೀಡಿದ ಸಿಜೆಐ, ವಿಶೇಷ ವಿವಾಹ ಕಾಯ್ದೆಯ ಆಡಳಿತದಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ ಎಂದು ಹೇಳಿದರು.

ಇಸ್ರೋ ಪ್ರಗತಿ ಪರಿಶೀಲಿಸಿದ ಪ್ರಧಾನಿ

ನವದೆಹಲಿ, ಅ. ೧೭: ಚಂದ್ರಯಾನ ಯಶಸ್ಸಿನ ಉತ್ತೇಜನಗೊಂಡಿರುವ ಇಸ್ರೋ ಸಂಸ್ಥೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿ ಇಂದು ಭಾಗವಹಿಸಿದ್ದರು. ೨೦೨೫ ರಿಂದ ೨೦೪೦ ವರೆಗೆ ಸಾಧಿಸಬೇಕಿರುವ ಅಂಶಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ೨೦೩೫ ರ ವೇಳೆಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸಿ ೨೦೪೦ ರ ವೇಳೆಗೆ ಚಂದ್ರನ ಮೇಲೆ ಓರ್ವ ಭಾರತೀಯನನ್ನು ಕಳಿಸುವ ಯೋಜನೆಗಳನ್ನು ಸಾಧಿಸಬೇಕು ಎಂದು ಪ್ರಧಾನಿ ಮೋದಿ ಇಸ್ರೋಗೆ ಹೇಳಿದ್ದಾರೆ. ಗಗನ್ ಯಾನ್ ಮಿಷನ್ ಭಾಗವಾಗಿ ಅ.೨೧ ರಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿAದ ಬೆಳಿಗ್ಗೆ ೭ ರಿಂದ ೯ವರೆಗೆ ಪರೀಕ್ಷಾ ವಾಹಕದ ಉಡಾವಣೆ ಮಾಡುವ ಮೂಲಕ ಗಗನ್‌ಯಾನ ಮಾನವ ರಹಿತ ಹಾರಾಟ ಪರೀಕ್ಷೆಯನ್ನು ನಡೆಸುವುದು ಹಾಗೂ ಇನ್ನಿತರ ಉಪಕ್ರಮಗಳ ಬಗ್ಗೆ ಇಸ್ರೋ ಅಧ್ಯಕ್ಷರು ಸಭೆಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ನಿರ್ದೇಶನ ನೀಡಿದ್ದಾರೆ.

ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ

ಬೆಂಗಳೂರು, ಅ. ೧೭: ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದಕ್ಕೆ ಬಾಕಿ ಹಣವನ್ನು ಶೀಘ್ರವೆ ಬಿಡುಗಡೆ ಮಾಡಬೇಕೆಂದು ಸರ್ಕಾರ ಆಗ್ರಹಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್‌ಗೆ ಪತ್ರ ಬರೆದಿದ್ದಾರೆ. ಆಗಸ್ಟ್ ೨೯ ರಿಂದ ೪೭೮.೪೬ ಕೋಟಿ ರೂಪಾಯಿ ಮೊತ್ತದ ಎಂ.ಒ.ಆರ್.ಡಿ.ಯ ವೇತನ ಬಿಡುಗಡೆಯಾಗಿಲ್ಲ ಎಂದು ವಂದಿತಾ ಶರ್ಮಾ ಉಲ್ಲೇಖಿಸಿದ್ದಾರೆ. ಕರ್ನಾಟಕದ ಗ್ರಾಮೀಣಾಭಿವೃದ್ಧಿ ಕಮೀಷನರೇಟ್ ಪ್ರಸ್ತುತ ಮತ್ತು ಹಿಂದಿನ ವರ್ಷದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಬಳಕೆಯ ಪ್ರಮಾಣಪತ್ರಗಳು ಮತ್ತು ವಾರ್ಷಿಕ ಲೆಕ್ಕಪರಿಶೋಧಕ ವಿವರಗಳನ್ನು ಸಲ್ಲಿಸಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ - ಸಾವಿರಾರು ಮಂದಿ ಸಾವು

ವಾಷಿಂಗ್ಟನ್, ಅ. ೧೭: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೆ, ಇಸ್ರೇಲ್‌ನ ವಾಯು ದಾಳಿಯಲ್ಲಿ ಗಾಜಾದಲ್ಲಿನ ನೂರಾರು ಕಟ್ಟಡಗಳು ಧರೆಗುರುಳುತ್ತಿವೆ. ಈ ದಾಳಿಯಲ್ಲಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಆದರೆ ಇವರಿಗೆ ಗಾಜಾದಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ೫೦ ಸಾವಿರಕ್ಕೂ ಹೆಚ್ಚು ಮಂದಿ ಗರ್ಭೀಣಿಯರಿದ್ದು ಅವರ ವೈದ್ಯಕೀಯ ಆರೈಕೆ ಲಭ್ಯತೆ ಕುರಿತಂತೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೂ ೪,೨೦೦ ಮಂದಿ ಸಾವನ್ನಪ್ಪಿದ್ದರೆ, ಕೇವಲ ೧೦ ದಿನಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊAಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ನಾಗರಿಕರ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವನ್ನು ವಿಶ್ವಸಂಸ್ಥೆ ಮಾನವ ಹಕ್ಕುಗಳ ವಕ್ತಾರರು ವ್ಯಕ್ತಪಡಿಸಿದ್ದಾರೆ.

ಭಾರತದಿಂದ ‘ಆಪರೇಷನ್ ಅಜಯ್’ ಕಾರ್ಯಾಚರಣೆ

ನವದೆಹಲಿ, ಅ. ೧೭: ಇಸ್ರೇಲ್‌ನಿಂದ ೨೮೬ ಮಂದಿ ಭಾರತೀಯರನ್ನು ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಪರೇಷನ್ ಅಜಯ್ ಕಾರ್ಯಾಚರಣೆ ಮುಂದುವರಿದಿದೆ. ಇನ್ನೂ ೨೮೬ ಪ್ರಯಾಣಿಕರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ. ಜೊತೆಗೆ ೧೮ ಮಂದಿ ನೇಪಾಳದ ನಾಗರಿಕರು ಇದ್ದಾರೆ ಎಂದು ತಿಳಿಸಿದ್ದಾರೆ. ಸ್ವದೇಶಕ್ಕೆ ಮರಳಲು ಬಯಸುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರದ ಈಚೆಗೆ ‘ಆಪರೇಷನ್ ಅಜಯ್' ಕಾರ್ಯಾಚರಣೆ ಆರಂಭಿಸಿತ್ತು.

ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ - ೧೧ ಸಾವು

ತಮಿಳುನಾಡು, ಅ. ೧೭: ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಈ ಘಟನೆಯಲ್ಲಿ ೧೧ ಮಂದಿ ಸಾವನ್ನಪ್ಪಿದ್ದು ಮೃತಪಟ್ಟವರಲ್ಲಿ ೯ ಮಹಿಳೆಯರು ಸೇರಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯA ಮತ್ತು ಶಿವಕಾಶಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಟಾಕಿ ಮಾದರಿ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನಿಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ ೩ ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ಜನರು ಒಟ್ಟಾಗಿ ಬೆಂಕಿಯನ್ನು ನಂದಿಸಲು ಮತ್ತು ಸಂತ್ರಸ್ತರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಘಟನೆ ಮತ್ತು ಕಾರ್ಖಾನೆಗಳಿಗೆ ಮಾನ್ಯ ಪರವಾನಗಿ ಇದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.