ಗೋಣಿಕೊಪ್ಪಲು, ಅ.೧೭ : ದಸರಾ ಜನೋತ್ಸವದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ನಗರಕ್ಕೆ ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕÀ ಡಾ. ಎಂ.ಬಿ. ಬೋರಲಿಂಗಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋಣಿಕೊಪ್ಪ ಪೊಲೀಸ್ ಠಾಣೆಗೆ ಆಗಮಿಸಿದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳೀಯ ಮಟ್ಟದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು. ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಹಾಗೂ ಪದಾಧಿಕಾರಿಗಳಿಂದ ದಸರಾ ವ್ಯವಸ್ಥೆ ಕುರಿತು ಅಧಿಕಾರಿಗಳು ವಿಚಾರ ವಿನಿಮಯ ನಡೆಸಿದರು.
ನವರಾತ್ರಿ ದಿನದಂದು ನಗರದ ಹಲವು ಭಾಗದಲ್ಲಿ ಪೊಲೀಸರ ವಿಶೇಷ ಗಸ್ತು ವ್ಯವಸ್ಥೆ ಮಾಡಲಾಗುತ್ತದೆ. ಅಗತ್ಯ ಬಿದ್ದಲ್ಲಿ ನಾಗರಿಕರು ಕೂಡಲೇ ಪೊಲೀಸರನ್ನು ಭೇಟಿ ಮಾಡುವ ಸಲುವಾಗಿ ಈ ವ್ಯವಸ್ಥೆ ಮಾಡಲಾಗುತ್ತಿದೆ. ನಾಗರಿಕರು ಕೂಡ ಇಲಾಖೆಯೊಂದಿಗೆ ಸಹಕರಿಸುವಂತೆ ಐಜಿಪಿ ಹಾಗೂ ಕೊಡಗು ಎಸ್.ಪಿ.ಮನವಿ ಮಾಡಿದರು.
ಕೊಡಗು ಸೇರಿದಂತೆ ಇನ್ನಿತರ ಭಾಗದಿಂದ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ. ಹೆಚ್ಚಿನ ಜನಸಂದಣಿಯ ಸೇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಭೇಟಿಯ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಗೋವಿಂದ ರಾಜು, ಎಸ್.ಐ.ರೂಪಾದೇವಿ ಬೀರಾದರ್, ಕಾವೇರಿ ದಸರಾ ಸಮಿತಿಯ ಅಧ್ಯಕ್ಷÀ ಪ್ರಮೋದ್ ಗಣಪತಿ, ಖಜಾಂಜಿ ಧ್ಯಾನ್ ಸುಬ್ಬಯ್ಯ, ಕಾರ್ಯದರ್ಶಿ ಕಂದಾ ದೇವಯ್ಯ, ಉಪಾಧ್ಯಕ್ಷ ಶಿವಾಜಿ ಮತ್ತಿತರರು ಉಪಸ್ಥಿತರಿದ್ದರು.